• Wed. Jun 19th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಅ.15 ರಿಂದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರೋತ್ಸವ

  • Home
  • ಅ.15 ರಿಂದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರೋತ್ಸವ

ಕುಂದಾಪುರ : ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಅ.15ರಿಂದ ಅ.24ರ ವರೆಗೆ ಜರುಗಲಿರುವುದು.

ಅ.15ರಂದು ಬೆಳಿಗ್ಗೆ ಕಲಶ ಸ್ಥಾಪನೆಯೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ದೊರಕಲಿದ್ದು, ಅಂದು ಬೆಳಿಗ್ಗೆ ಅಮ್ಮನವರಿಗೆ “ವಿಶೇಷ ಅಲಂಕಾರ”, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ.

ಅ.16ರಿಂದ ಅ.21ರ ವರೆಗೆ ಪ್ರತಿದಿನ ಅಮ್ಮನವರಿಗೆ ವಿಶೇಷ ಅಲಂಕಾರ, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ.
ಅ.22 ರಂದು ಭಾನುವಾರ ಬೆಳಿಗ್ಗೆ 9ಕ್ಕೆ ಪುಣ್ಯಾಹ, ಗಣಪತಿ ಪೂಜೆ, *”ಚಂಡಿಕಾಯಾಗ*”, ಮಧ್ಯಾಹ್ನ 12.30ಕ್ಕೆ ಪೂರ್ಣಾಹುತಿ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ *ಮಹಾ ಅನ್ನಸಂತರ್ಪಣೆ*” ಕಾರ್ಯಕ್ರಮ ನಡೆಯಲಿರುವುದು.

ನವರಾತ್ರಿಯ ಸಂದರ್ಭದಲ್ಲಿ ಪ್ರತಿ ದಿನ ತಾಯಿಗೆ ಹರಕೆ ಬಂದಂತಹ ಸೀರೆಗಳ ಏಲಂ ಕೂಡ ನಡೆಯಲಿರುವುದು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಮರಕಡ ಶ್ರೀ ಗುರುಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಯೋಗಿಶ್ವರೇಶ್ವರ ಸ್ವಾಮೀಜಿ ಅವರ ಅನುಗ್ರಹದೊಂದಿಗೆ ವೇ.ಮೂ. ಚಂದ್ರಶೇಖರ್ ಸೋಮಯಾಜಿ ಕೋಟ ಇವರ ನೇತೃತ್ವದಲ್ಲಿ ಜರುಗಲಿರುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *