

ಕೋಟ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಲಿದೆ ಎಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಸೋಜ ಹೇಳಿದರು. ಬುಧವಾರ ಪಾಂಡೇಶ್ವರ ಗ್ರಾಮ ಪಂಚಾಯತ್ ಹಾಗೂ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ ಇವರ ಸಹಯೋಗದಲ್ಲಿ ನಡೆದ ” ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ಕ್ರೀಯಾಶೀಲತೆಗೆ ಶಿಬಿರಗಳು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಶಿಬಿರದಲ್ಲಿ ಸ್ಥಳೀಯ ಮಕ್ಕಳಿಗೆ ಕಿರಿಯರು , ಹಿರಿಯರ ವಿಭಾಗದಲ್ಲಿ ಚೆಸ್, ಕೇರಂ, ಅಶುಭಾಷಣ, ಕಥೆ ಹೇಳುವುದು, ಕೆರೆ ದಡ, ಸಂಗೀತ ಕುರ್ಚಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಪಂಚಾಯತ್ ಸದಸ್ಯೆ ಸುಜಾತ ವೆಂಕಟೇಶ್ ಉಪಸ್ಥಿತರಿದ್ದರು. ಪಾಂಡೇಶ್ವರ ಪಂಚಾಯತ್ ಕಾರ್ಯದರ್ಶಿ ವಿಜಯ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ವಂದಿಸಿದರು.
ಪಾಂಡೇಶ್ವರ ಗ್ರಾಮ ಪಂಚಾಯತ್ ಹಾಗೂ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ ಇವರ ಸಹಯೋಗದಲ್ಲಿ ನಡೆದ ” ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಸೋಜ ಉದ್ಘಾಟಿಸಿದರು.