

ಕೋಟ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕದ ಆಶ್ರಯಲ್ಲಿ `ದತ್ತಿ ಉಪನ್ಯಾಸ ಕಾರ್ಯಕ್ರಮವು ಗುಂಡ್ಮಿ ಹಂಗಾರಕಟ್ಟೆ ಸದಾನಂದ ರಂಗ ಮಂಟಪದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಹಿತಿ ಪ್ರೋ. ಉಪೇಂದ್ರ ಸೋಮಯಾಜಿ ಓದುಗರೆಲ್ಲ ವೀಕ್ಷಕರಾಗಿ ಬದಲಾದ ಈ ಕಾಲಘಟ್ಟದಲ್ಲಿ ದತ್ತಿ ಉಪನ್ಯಾಸಗಳು ಮಹತ್ವವನ್ನು ಪಡೆಯುತ್ತಿದೆ. ಕಾದಂಬರಿಗಳ ಮರು ಓದು ಮತ್ತು ವಿಮರ್ಶೆ ಮಹತ್ವವನ್ನು ಪಡೆಯುತ್ತಿದೆ. ಇಂತಹ ಕಾರ್ಯಕ್ರಮಗಳು ಹಳ್ಳಿ ಹಳ್ಳಿಗಳಲ್ಲಿ ನಡೆದರೆ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಜನರು ಇನ್ನಷ್ಟು ಸ್ಪಂದಿಸುತ್ತಾರೆ ಎಂದು ಹೇಳಿದರು.
ಕ.ಸಾ.ಪ. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಜಿ.ರಾಮಚಂದ್ರ ಐತಾಳ ಅಧ್ಯಕ್ಷತೆ ವಹಿಸಿದ್ದರು. ಕ.ಸಾ.ಪ ಜಿಲ್ಲಾಧ್ಯಕ್ಷ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಮುಖ್ಯ ಅತಿಥಿಯಾಗಿ ದತ್ತಿ ದಾನಿಗಳಾದ ಸೂರಾಲು ನಾರಾಯಣ ಮಡಿ ಹಾಗೂ ಯಕ್ಷಗಾನ ಕೇಂದ್ರ ಹಂಗಾರಕಟ್ಟೆಯ ಕಾರ್ಯದರ್ಶಿಗಳಾದ ರಾಜಶೇಖರ ಹೆಬ್ಬಾರ್, ಸಾಹಿತಿ ನರೇಂದ್ರ ಕುಮಾರ್ ಕೋಟ ಭಾಗವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ನಿವೃತ್ತ ಮುಖ್ಯ ಶಿಕ್ಷಕರಾದ ಜಿ. ಗಣೇಶ್ ಮೂರ್ತಿ ಹೆಬ್ಬಾರ್ ಇವರು ಕಾರಂತ ಕಾದಂಬರಿ ವಿಮರ್ಶೆ, ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಿ. ಸಂಜೀವ ಇವರು `ಕುಂದಾಪ್ರ ಕನ್ನಡ ಅಂದು-ಇಂದು ಹಾಗೂ ಸಾಂಸ್ಕೃತಿಕ ಚಿಂತಕರಾದ ಡಾ. ಜಿ. ವೈಕುಂಠ ಹೇರ್ಳೆ ಇವರು ಯಕ್ಷಗಾನದಲ್ಲಿ ಕನ್ನಡ ಅಂದು-ಇಂದು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಕಸಾಪ ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಜ್ಯೋತಿ ಕೃಷ್ಣ ಪೂಜಾರಿ ನಿರೂಪಿಸಿದರು.ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ವಂದಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕದ ಆಶ್ರಯಲ್ಲಿ `ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಸಾಹಿತಿ ಪೆÇ್ರ. ಉಪೇಂದ್ರ ಸೋಮಯಾಜಿ ಉದ್ಘಾಟಿಸಿದರು. ಕ.ಸಾ.ಪ. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಜಿ.ರಾಮಚಂದ್ರ ಐತಾಳ, ಕ.ಸಾ.ಪ ಜಿಲ್ಲಾಧ್ಯಕ್ಷ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತಿತರರು ಉಪಸ್ಥಿತರಿದ್ದರು.