
ಕೋಟ: ಪಂಚವರ್ಣ ಒಂದು ಸಂಸ್ಥೆಯಲ್ಲ ಅದೊಂದು ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು.
ಬುಧವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ಸಾರಥ್ಯದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯಲ್ಲಿ ನಡೆಯುವ ಎರಡನೇ ವರ್ಷದ ಆಸಾಡಿ ಒಡ್ರ್ ಗ್ರಾಮೀಣ ಸೊಗಡುಗಳ ತಿಲ್ಲಾನ ಶೀರ್ಷಿಕೆಯಡಿ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಪಂಚವರ್ಣ ಸಂಸ್ಥೆ ಸ್ವಚ್ಛತಾ ಅಭಿಯಾನದಲ್ಲಿ ಹೊಸ ಭಾಷ್ಯ ಬರೆಯುತ್ತಿದೆ. ಹೊಸ ಹೊಸ ಕಾರ್ಯಕ್ರಮಗಳಿಂದ ಕ್ರೀಯಾಶೀಲತ್ವವನ್ನು ಮೈಗೂಡಿಸಿಕೊಂಡಿದೆ.ಸಾಮಾಜಿಕ ಪ್ರಜ್ಞೆಗೆ ಸಾಕ್ಷಿಕರಿಸಿದೆ. ಇಂತಹ ಸಂಘಸಂಸ್ಥೆಗಳಿಂದ ಸಮಾಜದಲ್ಲಿ ಉನ್ನತಿ ಸಾಧ್ಯ ಅದೇ ರೀತಿ ಹಂದಟ್ಟು ಪರಿಸರದಲ್ಲಿ ಆಯೋಜಿಸಲಿರುವ ಆಸಾಡಿ ಒಡ್ರ್ ಗ್ರಾಮೀಣ ಜನರ ಸಂಸ್ಕ್ರತಿ ಹಾಗೂ ನಾಡಿ ಮಿಡಿತಕ್ಕೆ ವೇದಿಕೆ ಕಲ್ಪಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಕಿ ಹಂದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ಅಧ್ಯಕ್ಷತೆ ವಹಿಸಿದರು. ಕೋಟ ವಿವೇಕ ವಿದ್ಯಾ ಸಂಸ್ಥೆಯ ಕನ್ನಡ ಪ್ರಾಧ್ಯಾಪಕ ಸದಾಶಿವ ಹೊಳ್ಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ, ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಗಿಳಿಯಾರು, ಸದಸ್ಯೆ ಶಕೀಲ ನಾಗರಾಜ್ ಪೂಜಾರಿ, ಪಂಚವರ್ಣ ಯುವಕ ಮಂಡಲದ ಸದಸ್ಯ ಶಶಿಧರ ತಿಂಗಳಾಯ, ಹಂದಟ್ಟು ಹಾಲು ಉತ್ಪಾದಕ ಮಹಿಳಾ ಸಹಕಾರಿ ಸಂಘದ ಉಪಾಧ್ಯಕ್ಷರು ನಿರ್ದೇಶಕರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಪುಷ್ಭಾ ಕೆ ಹಂದಟ್ಟು ಸ್ವಾಗತಿಸಿದರೆ, ಕಾರ್ಯಕ್ರಮವನ್ನು ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ನಿರೂಪಿಸಿದರು. ಉಪಾಧ್ಯಕ್ಷೆ ವಸಂತಿ ಹಂದಟ್ಟು ವಂದಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.
ಕೋಟದ ಪಂಚವರ್ಣ ಮಹಿಳಾ ಮಂಡಲದ ಸಾರಥ್ಯದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯಲ್ಲಿ ನಡೆಯುವ ಎರಡನೇ ವರ್ಷದ ಆಸಾಡಿ ಒಡ್ರ್ ಆಮಂತ್ರಣವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಕಿ ಹಂದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಕೋಟ ವಿವೇಕ ವಿದ್ಯಾ ಸಂಸ್ಥೆಯ ಕನ್ನಡ ಪ್ರಾಧ್ಯಾಪಕ ಸದಾಶಿವ ಹೊಳ್ಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಮತ್ತಿತರರು ಇದ್ದರು.
Leave a Reply