
ಕೋಟ: ಸಾಧನೆಯ ಹಂಬಲವಿರುವ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತು ಪ್ರೋತ್ಸಾಹಿಸುವುದು ಸಮಾಜದ ಋಣ ತೀರಿಸಿದ ಸಾರ್ಥಕ ಭಾವನೆ ಮೂಡಿಸುತ್ತದೆ, ಎಂದು ಕೋಟದ ಸಮಾಜ ಸೇವಾ ಸಂಸ್ಥೆಯಾದ ಗೀತಾನಂದ ಫೌಂಡೇಶನ್‍ನ ಪ್ರವರ್ತಕ ಆನಂದ ಸಿ ಕುಂದರ್ ಹೇಳಿದರು.
ಮಣೂರು ಪಡುಕರೆಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಈ ವರ್ಷ ದಾಖಲಾದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಕೊಡುಗೆಯಾಗಿ ನೀಡಿದ ಸಮವಸ್ತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ಗೀತಾನಂದ ಫೌಂಡೇಶನ್‍ನ ಟ್ರಸ್ಟಿ ವೈಷ್ಣವಿ ರಕ್ಷಿತ್ ಕುಂದರ್ ಪಿಯುಸಿ ನಂತರದ ಕೋರ್ಸ್‍ಗಳ ಆಯ್ಕೆಯ ಕುರಿತು ಮಾರ್ಗದರ್ಶನ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಜಿ ಕೆ. ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ಕಾರ್ಯಕ್ರಮ ನಿರ್ವಹಿಸಿ, ಓಂಶ್ರೀ ವಂದಿಸಿದರು. ಉಪನ್ಯಾಸಕರು ಉಪಸ್ಥಿತರಿದ್ದರು.
ಮಣೂರು ಪಡುಕರೆಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಈ ವರ್ಷ ದಾಖಲಾದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಕೊಡುಗೆಯಾಗಿ ನೀಡಿದ ಸಮವಸ್ತ್ರಗಳನ್ನು ಅದರ ಪ್ರವರ್ತಕ ಆನಂದ ಸಿ ಕುಂದರ್ ವಿತರಿಸಿದರು.
Leave a Reply