Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ನಟ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ: ಆರೋಪಿ ವಶಕ್ಕೆ

ಬೆಂಗಳೂರು: ನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿರುವ ಪ್ರಕರಣ ಸಂಬಂಧ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ನಿಶಾ ನರಸಪ್ಪ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ದೂರು ನೀಡಿದ್ದಾರೆ. ಯಶಸ್ವಿನಿ ಅವರಿಗೆ ಇನ್ ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.
ವಂಶಿಕಾ ಹೆಸರು ಹಾಗೂ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿ, ‘ಮಕ್ಕಳಿಗೆ ಟಿ.ವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕೊಡಿಸುತ್ತೇನೆ’ ಎಂದು ಜಾಹೀರಾತು ನೀಡುತ್ತಿದ್ದರು. ಫೋಟೊಶೂಟ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆಯುತ್ತಿದ್ದರು. ನಂತರ, ಯಾವುದೇ ಅವಕಾಶ ಕೊಡಿಸದೇ ಜನರನ್ನು ವಂಚಿಸುತ್ತಿದ್ದರು’ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *