
ವರ್ಗಾವಣೆಗೊಂಡ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಶ್ರೀಯುತರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತಾಡಿದ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ರವರು ಶ್ರೀ ಯುತರ ತಾಳ್ಮೆ, ಕರ್ತವ್ಯ ನಿಷ್ಠೆ,ನಾಯಕತ್ವ ಗುಣವನ್ನು ಶ್ಲಾಘನೆ ಮಾಡಿ ಶುಭ ಹಾರೈಸಿದರು. ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಪೂರ್ಣಿಮಾ, ಸಹಾಯಕ ನಿರ್ದೇಶಕಿ ಕನ್ನಡ ಸಂಸ್ಕೃತಿ ಇಲಾಖೆ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ,ರಾಮಾಂಜಿ ಉಪಸ್ಥಿತರಿದ್ದರು.
Leave a Reply