
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಇಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವರ್ಗಾವಣೆಗೊಂಡ ಸೇಸು ಟೀಚರ್ ಇವರಿಗೆ ಬಿಳ್ಕೊಡುಗೆ ಸಮಾರಂಭ ಹಂಗಾರಕಟ್ಟೆ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸಹ ಶಿಕ್ಷಕರು ಹಾಗೂ ಪೋಷಕರು ಮತ್ತು ಎಸ್‍ಡಿಎಂಸಿ ಸದಸ್ಯರು ಹಳೆ ವಿದ್ಯಾರ್ಥಿಗಳು ಎಲ್ಲರೂ ಒಡಗೂಡಿ ಸೇಸು ಟೀಚರ್‍ಗೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿ ಎಂಸಿ ಅಧ್ಯಕ್ಷ ಡೆನಿಸ್ ಡಿಸೋಜ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಬ್ರಹ್ಮಾವರ ಕ್ಷೇತ್ರ ಸಮನ್ವಯ ಅಧಿಕಾರಿ ಅರ್ಚನಾ ಹೆಗಡೆ , ಹಂಗಾರಕಟ್ಟೆ ಸಿಆರ್‍ಪಿ ಅನುಪಮಾ, ಚೇತನಾ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಗಣೇಶ .ಜಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಜಯಂತಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕಿ ಉಷಾರಾಣಿ ನಿರೂಪಿಸಿ ನಿರ್ವಹಿಸಿದರು. ಶಿಕ್ಷಕಿ ಪ್ರಸಿಲ್ಲ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸನ್ಮಾನ ಪತ್ರವನ್ನು ಶಿಕ್ಷಕಿ ರಮ್ಯ ವಾಚಿಸಿದರು. ಹಾಗೂ ಶಿಕ್ಷಕಿ ವೀಣಾ ಸನ್ಮಾನಿತರ ಬಗ್ಗೆ ಪರಿಚಯಿಸಿದರು.ಶಿಕ್ಷಕಿ ಯಶೋಧ ವಂದಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಇಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವರ್ಗಾವಣೆಗೊಂಡ ಸೇಸು ಟೀಚರ್ ಇವರಿಗೆ ಬಿಳ್ಕೊಡುಗೆ ನೀಡಿ ಅಭಿನಂದಿಸಲಾಯಿತು. ಬ್ರಹ್ಮಾವರ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಬ್ರಹ್ಮಾವರ ಕ್ಷೇತ್ರ ಸಮನ್ವಯ ಅಧಿಕಾರಿ ಅರ್ಚನಾ ಹೆಗಡೆ ಮತ್ತಿತರರು ಇದ್ದರು.
Leave a Reply