
ಕೋಟ: ಉಡುಪಿ.ಜಿ.ಪಂ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಉಡುಪಿ, ಫ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ ಉಡುಪಿ,ಕೋಟ ವಿದ್ಯಾ ಸಂಘ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಫ್ರೌಢಶಾಲಾ ಮುಖ್ಯಸ್ಥರ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಜರಗಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ ಮಚ್ಚೀಂದ್ರ ಉದ್ಘಾಟಿಸಿ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ದಿಕ್ಕು ಬದಲಾಗಿಸುವ ಜಾಲ ಹಬ್ಬಿಕೊಂಡಿದೆ, ವಿದ್ಯಾರ್ಥಿಗಳ ಜೀವನ ಜತೆ ಚಲ್ಲಾಟ ಸಲ್ಲ ಇದಕ್ಕಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ಅಮಲು ಪದಾರ್ಥಗಳ ಕುರಿತು ಜಾಗೃತಿ ಮೂಡಿಬೇಕು, ಒತ್ತಡದಿಂದ ಬದುಕು ಸಾಗಿಸಿ ದುಶ್ಚಟಕ್ಕೆ ಬಲಿಯಾಗು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರಲ್ಲದೆ.ಪರಿಸರದ ಆಸುಪಾಸು ಮಾದಕ ವಸ್ತುಗಳ ಬಳಕೆ ಕುರಿತಂತೆ ಪೋಲಿಸ್ ಇಲಾಖೆಯೊಡನೆ ಸ್ಥಳೀಯರು ಹಾಗೂ ಶಿಕ್ಷಣ ಸಂಸ್ಥೆ ಸಂವಹನ ನಡೆಸುತ್ತಿರಬೇಕು.
ಪೋಲಿಸ್ ಇಲಾಖೆ ಹಾಗೂ ಸಾಮಾಜಿಕ ವ್ಯವಸ್ಥೆ ಸದಾ ಸಂಪರ್ಕ ಇರಿಸಿಕೊಂಡ ಭಯ ಇಲ್ಲದೆ ವ್ಯವಸ್ಥೆಯಲ್ಲಿ ಎದುರಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಬೇಕು, ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ ಮೂಡಿಸಬೇಕು, ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಅತಿಯಾದ ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕು, ನಶೆ ಮುಕ್ತ ಭಾರತಕ್ಕಾಗಿ ಮಾದಕ ವಸ್ತುಗಳ ಬಳಕೆಯನ್ನು ಬೇರು ಸಹಿತ ಕಿತ್ತೆಸಯಬೇಕು ಎಂದು ಕರೆ ಇತ್ತು ಈ ಸಮಾವೇಶ ಶಿಕ್ಷಣ ಸಂಸ್ಥೆಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು,ಎಸ್‍ಎಸ್‍ಎಲ್‍ಸಿ ಅತಿಹೆಚ್ಚು ಅಂಕಗಳಿಸಿದ ಉಡುಪಿ ಜಿಲ್ಲೆಯ ಸಾಧಕ ವಿದ್ಯಾರ್ಥಿಗಳನ್ನು, ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಸೇರಿದಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ, ಕಾರ್ಕಳ, ಬೈಂದೂರು ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ವಹಿಸಿ ಸ್ವಾಗತಿಸಿ ಪ್ರಾಸ್ತಾವನೆಗೈದರು.
ಮುಖ್ಯ ಅಭ್ಯಾಗತರಾಗಿ ಉಡುಪಿ ಜಿ.ಪಂ ಸಿ.ಪಿ.ಓ ಶ್ರೀನಿವಾಸ್, ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಗಣಪತಿ.ಕೆ, ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ನೋಡೇಲ್ ಅಧಿಕಾರಿ ಜ್ಞಾಹ್ನವಿ, ಬ್ರಹ್ಮಾವರ ತಾಲೂಕು ದೈಹಿಕ ಪರೀವಿಕ್ಷಕಿ ಪದ್ಮಾವತಿ, ಕೋಟ ವಿವೇಕ ವಿದ್ಯಾಸಂಘದ ಕಾರ್ಯದರ್ಶಿ ರಾಮದೇವ ಐತಾಳ್, ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ ನಾವಡ, ಉಡುಪಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಉಡುಪಿ ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಕಾರ್ಕಳ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಾವತಿ, ಬೈಂದೂರು ವಲಯ ಪ್ರಭಾರ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಘದ ಕಾರ್ಯದರ್ಶಿ ಎ.ಶಿವರಾಮ್ ನಿರೂಪಿಸಿ ವಂದಿಸಿದರು. ಉಡುಪಿ ಜಿಲ್ಲಾ ಫ್ರೌಢಶಾಲಾ ಮುಖ್ಯಸ್ಥರ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ,ಕಾರ್ಕಳ,ಬೈಂದೂರು ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಯಿತು.
Leave a Reply