
ಕೋಟ: ಗ್ರಾಮೀಣ ಪ್ರದೇಶದ ಶಾಲೆಯಾಗಿದ್ದುಕೊಂಡು ಹೆಸಕುತ್ತೂರು ಪ್ರಾಥಮಿಕ ಶಾಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ನಿಜಕ್ಕೂ ಅಭಿನಂದನೀಯ” ಎಂದು ಬ್ಯಾಂಕ್ ಆಫ್ ಬರೋಡಾದ ಸಲ್ವಾಡಿಯ ಶಾಖಾ ಪ್ರಬಂಧಕ ಸುನೀಲ್ ನುಡಿದರು. ಅವರು ಬ್ಯಾಂಕ್ ಆಫ್ ಬರೋಡಾದ 116ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಂಗವಾಗಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ಪ್ಲಾಸ್ಟಿಕ್ ಕುರ್ಚಿಗಳನ್ನು ಹಸ್ತಾಂತರಿಸಿ ಮಾತನಾಡುತ್ತಿದ್ದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು.
ಬ್ಯಾಂಕ್ ನ ಸಹಾಯಕ ಪ್ರಬಂಧಕರಾದ ಅನುಷಾ ಹಾಗೂ ಪುಷ್ಪಲತಾ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಗಾಯತ್ರಿ ಆಚಾರ್, ಶಾಲಾ ಸಹ ಶಿಕ್ಷಕರಾದ ಜಯರಾಮ ಶೆಟ್ಟಿ, ವಿಜಯಾ ಆರ್, ರವೀಂದ್ರ ನಾಯಕ್, ಗೌರವ ಶಿಕ್ಷಕಿ ಮಧುರಾ, ಶಾಲಾ ಎಸ್ಡಿಎಂಸಿ ಸದಸ್ಯರಾದ ಜಗದೀಶ್ ಶೆಟ್ಟಿಗಾರ್, ಶ್ರೀಕಾಂತ ಶೆಟ್ಟಿ, ವಿನುತ, ವಿಜಯ ಕುಲಾಲ, ಆಶಾ ಕುಲಾಲ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಸ್ವಾಗತಿಸಿದರು. ಸಹಶಿಕ್ಷಕರಾದ ಅಶೋಕ ತೆಕ್ಕಟ್ಟೆ ನಿರೂಪಿಸಿದರು ಹಾಗೂ ವಿಜಯ ಶೆಟ್ಟಿ ವಂದಿಸಿದರು.
ಬ್ಯಾಂಕ್ ಆಫ್ ಬರೋಡಾದ 116ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಂಗವಾಗಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ಪ್ಲಾಸ್ಟಿಕ್ ಕುರ್ಚಿಗಳನ್ನು ಸಲ್ವಾಡಿಯ ಶಾಖಾ ಪ್ರಬಂಧಕ ಸುನೀಲ್ ಹಸ್ತಾಂತರಿಸಿದರು. ಅನುಷಾ ಹಾಗೂ ಪುಷ್ಪಲತಾ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಗಾಯತ್ರಿ ಆಚಾರ್, ಶಾಲಾ ಸಹ ಶಿಕ್ಷಕರಾದ ಜಯರಾಮ ಶೆಟ್ಟಿ, ವಿಜಯಾ ಆರ್, ರವೀಂದ್ರ ನಾಯಕ್ ಮತ್ತಿತರರು ಇದ್ದರು.
Leave a Reply