
ಉಡುಪಿ: ಕ್ರಿಶ್ಚಿಯನ್ ಹೈಸ್ಕೂಲ್ ಹಳೇ ವಿದ್ಯಾರ್ಥಿ ಸಂಘ ಉಡುಪಿ ಇದರ ವತಿಯಿಂದ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 14ನೇ ವರ್ಷದ ಪ್ರೋತ್ಸಾಹ ಧನ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ದಿನಾಂಕ 22-07-2023 ರಂದು ಆಯೋಜಿಸಲಾಯಿತು. ಮತ್ತು ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಹೈಸ್ಕೂಲ್ ಹಳೇ ವಿದ್ಯಾರ್ಥಿ ಮತ್ತು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣರವರನ್ನು ಸನ್ಮಾನಿಸಲಾಯಿತು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ಶಾಲೆಗೆ ಕೀರ್ತಿಯನ್ನು ತರಲಿ ಎಂದು ವಿದ್ಯಾರ್ಥಿಗಳಿಗೆ ಶಾಸಕರು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಗುರು ಹೇಮಚಂದ್ರ ಕುಮಾರ್, ಸಹಾಯಕ ಧರ್ಮಗುರು ಐವನ್ ಡಿ ಸೋನ್ಸ್, ನಿವೃತ್ತ ಶಿಕ್ಷಕ ಮುರಳಿ ಕಡೆಕಾರ್, ಕಿಶೋರ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಹೆಲೆನ್ ಸಾಲಿನ್ಸ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಜೋಯಿಲಿನ್ ಪರಿಮಳ ಕರ್ಕಡ, ಪ್ರಾಂಶುಪಾಲೆ ಶ್ವೇತ ಶ್ರೀನಿವಾಸ್, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಈಶ್ವರ ಶೆಟ್ಟಿ ಚಿಟ್ಪಾಡಿ, ಅಧ್ಯಕ್ಷ ಪ್ರತಾಪ್ ಕುಮಾರ್, ಕಾರ್ಯದರ್ಶಿ ಮನೋಜ್ ಉಪಸ್ಥಿತರಿದ್ದರು.

Leave a Reply