
ಬೈಂದೂರು : ಉಡುಪಿ ಜಿಲ್ಲೆಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ತೆರಳಿದ ಯುವಕನೊಬ್ಬ ಕಾಲು ಜಾರಿ ನೀರು ಪಾಲಾದ ಘಟನೆ ಬೈಂದೂರು ತಾಲೂಕಿನಲ್ಲಿ ನಡೆದಿದೆ. ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಎಂಬ ಜಲಪಾತದಲ್ಲಿ ಈ ಅವಘಡ ಸಂಭವಿಸಿದ್ದು, ನೀರುಪಾಲಾದ ಯುವಕನನ್ನು ಭದ್ರಾವತಿ ಮೂಲದ ಶರತ್ ಕುಮಾರ್ (23) ಎನ್ನಲಾಗಿದೆ.
ಭದ್ರಾವತಿಯಿಂದ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ತೆರಳಿದ್ದ. ಈ ವೇಳೆ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದಾನೆ. ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.
ಯುವಕನ ಪತ್ತೆಗಾಗಿ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾ ಚರಣೆ ಮುಂದುವರೆಸಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Reply