
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ತೆಕ್ಕಟ್ಟೆ ವಲಯ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ.,ಕೆ ಎಂ.ಸಿ.ಮಣಿಪಾಲ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕುಂಭಾಶಿ ಮತ್ತು ಕ್ಷೇಮ ಕೇಂದ್ರ ತೆಕ್ಕಟ್ಟೆ ಹಾಗೂ ಗ್ರಾಮ ಪಂಚಾಯತ್ ತೆಕ್ಕಟ್ಟೆ, ರೋಟರಿ ಕ್ಲಬ್ ತೆಕ್ಕಟ್ಟೆ ,ಜಿ ಎಸ್ ಸಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ತೆಕ್ಕಟ್ಟೆ ಸುಧೀಂದ್ರ ಸಭಾಭವನದಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ರೋಟರಿ ತರಬೇತುದಾರರಾದ ಅಭಿನಂದನ್ ಶೆಟ್ಟಿ ನೇರವೇರಿಸಿ ಮಾತನಾಡಿ ನೇತ್ರದಾನ ಎನ್ನುವುದು ಒಂದು ಶ್ರೇಷ್ಟವಾದ ದಾನವಾಗಿದೆ,ಕತ್ತಲು ಸರಿಸಿ ಬೆಳಕಿನಡೆಗೆ ಈ ದಾನ ಪ್ರಕ್ರೀಯೆ ಸಹಕಾರಿಯಾಗಿದೆ ಪ್ರತಿಯೊಬ್ಬರು ನೇತ್ರ ತಪಾಸಣೆ ಶಿಬಿರದಲ್ಲಿ ಭಾಗಿಯಾಗುವುದರ ಜತೆಗೆ ದೃಷ್ಠಿ ಹೀನರಿಗೆ ನೇತ್ರದಾನ ಮಾಡಲು ಶಿಬಿರಾರ್ಥಿಗಳಿಗೆ ಕರೆ ಇತ್ತರು. ತೆಕ್ಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಸುಧಾಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತೆಕ್ಕಟ್ಟೆ ಗ್ರಾಮಪಂಚಾಯತ್ ಅಧ್ಯಕ್ಷೆ ಮಮತಾ ದೇವಾಡಿಗ . ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೋಭಾ. ಹೆಚ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ಯೋಜನಾಧಿಕಾರಿ ನಾರಾಯಣ್ ಪಾಲನ್, ಜಿಎಸ್ಬಿ ಚಾರಿಟೇಬಲ್ ಟ್ರಸ್ಟ್ ತೆಕ್ಕಟ್ಟೆ ಅಧ್ಯಕ್ಷ ಸಂತೋಷ್ ನಾಯಕ್ ತೆಕ್ಕಟ್ಟೆ ,ಧ.ಗ್ರಾ.ಯೋಜನೆ ತೆಕ್ಕಟ್ಟೆ ವಲಯದ ಮೇಲ್ವಿಚಾರಕ ರಾಧಿಕಾ, ಸ್ಥಳೀಯ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಸೇವಾ ಪ್ರತಿನಿಧಿ ಯವರು ರೋಟರಿ ಕ್ಲಬ್ ನ ಪದಾಧಿಕಾರಿಗಳು ಹಾಗೂ ಸದಸ್ಯರು,ಧ.ಗ್ರಾ.ಯೋಜನೆ ತೆಕ್ಕಟ್ಟೆ ಸೇವಾ ಪ್ರತಿನಿಧಿ ಅಮೃತಾ, ಸಾರಿಕಾ ಉಪಸ್ಥಿತರಿದ್ದರು.
ತೆಕ್ಕಟ್ಟೆ ರೋಟರಿ ಕ್ಲಬ್ ಸದಸ್ಯ ಕೃಷ್ಣ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಮೇಲ್ವಿಚಾರಕಿ ರಾಧಿಕಾ ಕಾರ್ಯಕ್ರಮ ನಿರ್ವಹಿಸಿದರು.ರೋಟರಿ ಕಾರ್ಯದರ್ಶಿ ಮುತಾರಿಫ್ ವಂದಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಸಾರ್ವಜನಿಕರು ಕಾರ್ಯಕರ್ತರು,ರೋಟರಿ ಸದಸ್ಯರು ಮತ್ತು ಪದಾಧಿಕಾರಿಗಳು ಭಾಗವಹಿಸಿ ನೇತ್ರ ತಪಾಸಣೆ ಭಾಗಿಯಾದರು.
ತೆಕ್ಕಟ್ಟೆ ಸುಧೀಂದ್ರ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ತೆಕ್ಕಟ್ಟೆ ವಲಯ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ.ಉಚಿತ ನೇತ್ರ ತಪಾಸಣಾ ಶಿಬಿರವನ್ನು ಜಿಲ್ಲಾ ರೋಟರಿ ತರಬೇತುದಾರರಾದ ಅಭಿನಂದನ್ ಶೆಟ್ಟಿ ನೇರವೇರಿಸಿದರು. ತೆಕ್ಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಸುಧಾಕರ್ ಶೆಟ್ಟಿ, ತೆಕ್ಕಟ್ಟೆ ಗ್ರಾಮಪಂಚಾಯತ್ ಅಧ್ಯಕ್ಷೆ ಮಮತಾ ದೇವಾಡಿಗ . ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೋಭಾ. ಹೆಚ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ಯೋಜನಾಧಿಕಾರಿ ನಾರಾಯಣ್ ಪಾಲನ್ ಮತ್ತಿತರರು ಇದ್ದರು.
Leave a Reply