
ಕೋಟ: ವಡ್ಡರ್ಸೆ ಗ್ರಾಮಪಂಚಾಯತ್ ವ್ಯಾಪ್ತಿಯ ಎಮ್ ಜಿ ಕಾಲೊನಿ ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆ.2ರಂದು ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋಧ ಸ್ತನ್ಯಪಾನದ ಮಹತ್ವದ ಬಗ್ಗೆ ತಿಳಿಸಿ ಸರಕಾರ ಆರೋಗ್ಯದ ಕಾಳಜಿ ನೀಡುವ ದಿಸೆಯಿಂದ ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿಕೊಂಡು ಮಾಹಿತಿ ಪಡೆಯಬೇಕು ಆ ಮೂಲಕ ಆರೋಗ್ಯವಂತ ಸಮಾಜಕ್ಕೆ ಮುನ್ನುಡಿ ಬರೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ವಡ್ಡರ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಪಿ ಕೋಟಿ ಪೂಜಾರಿ ,ಸಮುದಾಯ ಆರೋಗ್ಯ ಅಧಿಕಾರಿ ಮಮತಾ, ಅಂಗನವಾಡಿ ಕಾರ್ಯಕರ್ತೆ ಅನಿತಾ,ಸಹಾಯಕಿ ಸೌಲತ್, ಆಶಾ ಕಾರ್ಯಕರ್ತೆಯರಾದ ಪರಿಮಳ, ಭವಾನಿ ಉಪಸ್ಥಿತರಿದ್ದರು.
ವಡ್ಡರ್ಸೆ ಗ್ರಾಮಪಂಚಾಯತ್ ವ್ಯಾಪ್ತಿಯ ಎಮ್ ಜಿ ಕಾಲೊನಿ ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆ.2ರಂದು ಕಾರ್ಯಕ್ರಮ ನಡೆಯಿತು.














Leave a Reply