
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ತೆಕ್ಕಟ್ಟೆ ವಲಯದ ಬೇಳೂರು ಕಾರ್ಯಕ್ಷೇತ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ಬೇಳೂರಿನಲ್ಲಿ ಇತ್ತಿಚಿಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಕ್ಕಟ್ಟೆ ವಲಯದ ಜನಜಾಗೃತಿ ವಲಯಾಧ್ಯಕ್ಷ ಸುಧಾಕರ್ ಶೆಟ್ಟಿ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೋ.ಜಗದೀಶ್ ದುಶ್ಚಟಗಳು ಮತ್ತು ದುಷ್ಪರಿಣಾಮ ಕುರಿತು ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಯೋಜನಾಧಿಕಾರಿ ನಾರಾಯಣ್ ಪಾಲನ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕೊರ್ಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸೋನಿಕ್ , ರೋಟರಿ ಕಾರ್ಯದರ್ಶಿ ಮುತಾರಿಫ್. ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೆಕ್ಕಟ್ಟೆವಲಯದ ಮೇಲ್ವಿಚಾರಕಿ ರಾಧಿಕಾ ಕಾರ್ಯಕ್ರಮ ನಿರ್ವಹಿಸಿದರು. ಬೇಳೂರು ಬಿ, ಒಕ್ಕೂಟದ ಸೇವಾ ಪ್ರತಿನಿಧಿ ಉಷಾ ಸ್ವಾಗತಿಸಿದರೆ, ಬೇಳೂರು ಎ ಒಕ್ಕೂಟದ ಸೇವಾ ಪ್ರತಿನಿಧಿ ಶಿವಾನಿ ವಂದಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ತೆಕ್ಕಟ್ಟೆ ವಲಯದ ಬೇಳೂರು ಕಾರ್ಯಕ್ಷೇತ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಯೋಜನಾಧಿಕಾರಿ ನಾರಾಯಣ್ ಪಾಲನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕೊರ್ಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸೋನಿಕ್ ,ರೋಟರಿ ಕಾರ್ಯದರ್ಶಿ ಮುತಾರಿಫ್ ಇದ್ದರು.














Leave a Reply