
ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಎರಡನೆ ವರ್ಷದ ಆಸಾಡಿ ಒಡ್ರ್ ಗ್ರಾಮೀಣ ಸೋಗಡಿನ ತಿಲ್ಲಾನ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಇದೇ ಭಾನುವಾರ ಆ.6ರಂದು ಪೂರ್ವಾಹ್ನ 9.ಗ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ನಿರ್ದೇಶಕಿ ವೈಷ್ಣವಿ ರಕ್ಷಿತ್ ಕುಂದರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೋಟದ ಗ್ರಾಮೀಣ ಪರಿಸರದಲ್ಲಿ ಹುಟ್ಟಿ ಅವಿಭಜಿತ ಜಿಲ್ಲೆಗಳಲ್ಲಿ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸಾಧಕಿ ಕುಸುಮಾ ದೇವಾಡಿಗ ಇವರಿಗೆ ಆಸಾಡಿ ಒಡ್ರ್ ಗೌರವ ನೀಡಿ ಗೌರವಿದಲಿದ್ದು, ವಿಶೇಷ ಆಹ್ವಾನಿತರಾಗಿ ಕುಂದಗನ್ನಡದ ರಾಯಭಾರಿ ಮನು ಹಂದಾಡಿ ಗ್ರಾಮೀಣ ಭಾಷೆ ಸೋಗಡುಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ, ಗ್ರಾಮೀಣ ಪರಿಕರವನ್ನು ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ ಮಯ್ಯ ಮತ್ತಿತರರು ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮೀಣ ತಿನಿಸುಗಳ, ಪರಿಕರಗಳ ಪ್ರದರ್ಶನ ಸ್ಪರ್ಧೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ನೇಹಕೂಟ ಮಣೂರು ಇವರಿಂದ ಗ್ರಾಮೀಣ ನೃತ್ಯ ,ಪ್ರಹಸನ ಪ್ರದರ್ಶನಗೊಳ್ಳಲಿದೆ.














Leave a Reply