
ಕೋಟ: ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಆ.4ರಂದು ಕೇಂದ್ರ ಸರ್ಕಾರದ ಪೋಷನ್ ಅಭಿಯಾನ್ ಕಾರ್ಯಕ್ರಮದಡಿ ವಿಶ್ವ ಸ್ಥನ್ಯಪಾನ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಪರಸಪ್ಪ ದೊಡ್ಡಮನಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅಮಿತಾ , ಪಂಚಾಯತ್ ಸದಸ್ಯೆ ಗೀತಾಖಾರ್ವಿ , ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಲೋಚನಾ, ಸದಸ್ಯರಾದ ನಿರ್ಮಲಾ, ಸಂಜೀವಿನಿ ಸಂಘದ ಅಧ್ಯಕ್ಷೆ ದಿಪಾ ಖಾರ್ವಿ, ಕೃಷಿ ಸಖಿ ಶಾಂತಾ ಎ ಕುಂದರ್, ಅಂಗನವಾಡಿ ಸಹಾಯಕಿ ರೋಹಿಣಿ ಹಾಗೂ ಗರ್ಭಿಣಿಯರು, ಬಾಣಂತಿಯರು, ತಾಯಂದಿರು, ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಯಮುನಾ ಸಹಾಯಕಿ ರೋಹಿಣಿ ಇವರು ಸ್ವಾಗತಿಸಿದರು. ಆಶಾಕಾರ್ಯಕರ್ತೆ ಜ್ಯೋತಿ ವಂದಿಸಿದರು.
ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಪೋಷನ್ ಅಭಿಯಾನ್ ಕಾರ್ಯಕ್ರಮದಡಿ ವಿಶ್ವ ಸ್ಥನ್ಯಪಾನ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.














Leave a Reply