
ಕೋಟ : ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಹಾಗೂ ರೋಟರಿ ಕ್ಲಬ್ ಸಾೈಬ್ರಕಟ್ಟೆ ಅವರ ಆಶ್ರಯದಲ್ಲಿ ಆಗಸ್ಟ್ 6 ರಂದು ಕೋಟದ ವಿವೇಕ ವಿದ್ಯಾ ಸಂಸ್ಥೆಯ ಮಹಾತ್ಮ ಗಾಂಧಿ ಮೆಮೊರಿಯಲ್ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರ ನಡೆಯಲಿದ್ದು, ಕಾರ್ಯಕ್ರಮವನ್ನು ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕೊಡ್ಗಿ ವಹಿಸಲಿದ್ದಾರೆ.
ಉಪವಿಭಾಗಾಧಿಕಾರಿ ರಶ್ಮಿ ಎಸ್ ಆರ್, ಉದ್ಯಮಿ ಆನಂದ್ ಸಿ ಕುಂದರ್, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್ ಎಸ್, ಎಸ್ ಐ ಶಂಭುಲಿಂಗಯ್ಯ, ಎಂ, ಪಂಚಾಯತ್ ರಾಜ್ ತಜ್ಞ ಜನಾರ್ದನ ಮರವಂತೆ, ರಾಘವೇಂದ್ರ ಶೆಟ್ಟಿ ಕಟ್ಕೆರೆ, ಪ್ರಭಾಕರ ಮಯ್ಯ, ಯಶಸ್ವಿನಿ ಹೆಗ್ಡೆ, ಜಗದೀಶ ನಾವುಡ, ಅಕ್ಷತ್ ರಾಜ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ತರಬೇತಿ ನೀಡಲು ವಿಶೇಷ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದು ಪಂಚಾಯತ್ ಅಭಿವೃದ್ಧಿ ಅಧಿಕಾರ, ಗ್ರೇಡ್ -1 ಹಾಗೂ ಗ್ರೇಡ್ -2 ಕಾರ್ಯದರ್ಶಿ, ಲೆಕ್ಕ ಸಹಾಯಕ, ಗ್ರಾಮಲೆಕ್ಕಿಗ ಹುದ್ದೆ, ಪೋಲಿಸ್ ಕಾನ್ ಸ್ಟೇಬಲ್ ಹುದ್ದೆಯ ಒಂದು ದಿನದ ಕಾರ್ಯಾಗಾರ ನಡೆಯಲ್ಲಿದ್ದು, ಈ ಸಂದರ್ಭದಲ್ಲಿ “ಜನಾಧಿಕಾರ” ಪುಸ್ತಕ ಬರೆದಿರುವ ಎಸ್ ಜನಾರ್ದನ್ ಮರವಂತೆ ಅವರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ ಎಂದು ವಿ-ಶೈನ್ ಕೋಚಿಂಗ್ ಸೆಂಟರ್ನ ಹರೀಶ್ ಕುಮಾರ್ ಶೆಟ್ಟಿ, ಗಿರೀಶ್ ಕುಮಾರ್ ಶೆಟ್ಟಿ, ವಿವೇಕ್ ಅಮೀನ್ ಹಾಗೂ ರೋಟರಿ ಕ್ಲಬ್ ಕಾರ್ಯದರ್ಶಿ ಅಲ್ತಾರು ಗೌತಮ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













Leave a Reply