
ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ ಐರೋಡಿ, ಇವರ ವತಿಯಿಂದ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮೂರು ದಿನಗಳ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರವನ್ನು ರೋಟರಿ ಭವನ ಸಾಸ್ತಾನದಲ್ಲಿ ಇತ್ತೀಚಿಗೆ ಆಯೋಜಿಸಲಾಯಿತು.
ಕಾರ್ಯಾಗಾರವನ್ನು ರೋಟರಿ ಕ್ಲಬ್‍ನ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಅರವಿಂದ ಶರ್ಮ ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ತರಬೇತುದಾರರಾದ ವೀಣಾ ಶ್ಯಾನುಭೋಗ್ ಹಾಗೂ ಯಶೋಧ ಉಪಸ್ಥಿತರಿದ್ದರು. ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ ಐರೋಡಿ ಇದರ ಅಧ್ಯಕ್ಷೆ ಗೀತಾ ಎಸ್ ಅಧಿಕಾರಿ ಸ್ವಾಗತಿಸಿದರು. ಕಮಲಾಕ್ಷಿ ಹೊಳ್ಳ ಪ್ರಾರ್ಥನೆಗೈದರು. ಸುಕನ್ಯ ಹೊಳ್ಳ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ ಐರೋಡಿ, ಇವರ ವತಿಯಿಂದ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರವನ್ನು ರೋಟರಿ ಕ್ಲಬ್‍ನ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಅರವಿಂದ ಶರ್ಮ ಉದ್ಘಾಟಿಸಿದರು.













Leave a Reply