
ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವ್ಯಾಪ್ತಿಯಲ್ಲಿ ಬರುವ ಬ್ರಾಹ್ಮಣ ಸಮುದಾಯದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಂದ 2023-24 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಾಗಿ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಸಿಬ್ಬಂದಿಗಳಾದ ಜಿ.ಪ್ರಭಾಕರ ಮೈಯ್ಯ ಇವರನ್ನು ಸಂಪರ್ಕಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಹಿಂದಿನ ಸಾಲಿನ ಅಂಕಪಟ್ಟಿ, ಆದಾಯ ಪ್ರಮಾಣ ಪತ್ರದ ನಕಲಿನೊಂದಿಗೆ ಸೆಪ್ಟೆಂಬರ 15 ರ ಮುಂಚಿತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880390905 ನ್ನು ಸಂಪರ್ಕಿಸುವಂತೆ ಮಹಾಸಭಾದ ಪ್ರಕಟಣೆ ತಿಳಿಸಿದೆ.
Leave a Reply