
ಕೋಟ: ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘವು 2022-23 ನೇ ಸಾಲಿನ ವ್ಯವಹಾರಿಕ ಕಾರ್ಯ ಸಾಧನೆಗಾಗಿ ಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿ ಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರಿಂದ ಸಂಘದ ಅಧ್ಯಕ್ಷ ಬಿ.ಸುರೇಶ ಅಡಿಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಪೂಜಾರಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಗೋವಿಂದ ಪೂಜಾರಿ, ನಿರ್ದೇಶಕರಾದ ಶ್ರೀಧರ ಪಿ.ಎಸ್. ರಮೇಶ್ ಕಾರಂತ, ಕಮಲಾ ಆಚಾರ್ , ಲೀಲಾವತಿ ಗಂಗಾಧರ್ ರವರು ಉಪಸ್ಥಿತರಿದ್ದರು.
ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘವು 2022-23 ನೇ ಸಾಲಿನ ವ್ಯವಹಾರಿಕ ಕಾರ್ಯ ಸಾಧನೆಗಾಗಿ ಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನುಸಂಘದ ಅಧ್ಯಕ್ಷ ಬಿ.ಸುರೇಶ ಅಡಿಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಪೂಜಾರಿ ಪ್ರಶಸ್ತಿಯನ್ನು ಸ್ವೀಕರಿಸಿದರು.














Leave a Reply