
ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಲಯನ್ಸ್ & ಲಿಯೋ ಕ್ಲಬ್, ಪರ್ಕಳ, ಅಪ್ಪು ಅಭಿಮಾನಿಗಳ ಬಳಗ, ಉಡುಪಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ
ಇವರ ಜಂಟಿ ಆಶ್ರಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯರ ಕಲ್ಪನೆಯಂತೆ ಕ್ಷಯಮುಕ್ತ ಭಾರತದ ಯೋಜನೆಯ ಅಂಗವಾಗಿ ಕ್ಷಯಮುಕ್ತ ಉಡುಪಿ ನಗರ ಮಾಡುವ ನಿಟ್ಟಿನ ಉಡುಪಿ ನಗರದಲ್ಲಿನ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ ಹಾಗೂ ಕ್ಷಯರೋಗ ಮಾಹಿತಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಸಮಾರಂಭವನ್ನು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಮಾನ್ಯ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಗರ ಸಭಾ ಸದಸ್ಯರಾದ ವಿಜಯ ಕೊಡವೂರು, ಪ್ರಭಾಕರ ಪೂಜಾರಿ, ಟಿ. ಜಿ.ಹೆಗ್ಡೆ, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಬಸ್ರೂರು ರಾಜೀವ ಶೆಟ್ಟಿ, ಉದ್ಯಮಿ ಅಜಯ್ ಪಿ. ಶೆಟ್ಟಿ, ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿ ನಾಗಭೂಷಣ ಉಡುಪ ಮೊದಲಾದ ಗಣ್ಯರು ಉಪಸ್ಥಿತರಿದ್ದರು.














Leave a Reply