
ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕಾರ್ಕಡ ಗೆಳೆಯರ ಬಳಗ ಸಹಯೋಗದೊಂದಿಗೆ ಗಿಳಿಯಾರು ಯುವಕ ಮಂಡಲ ಗಿಳಿಯಾರು ಸಂಯೋಜನೆಯಲ್ಲಿ ಪರಿಸರಸ್ನೇಹಿ 9ನೇ ಸರಣಿ ಪರಿಸರ ಮಾಹಿತಿ ಕಾರ್ಯಾಗಾರ ಮಾಲಿಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಮುಕ್ತ ಹಾಗೂ ಹಸಿರು ಕ್ರಾಂತಿ ಸೃಷ್ಟಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತಂತೆ ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಾಹಿತಿ ಕಾರ್ಯಾಗಾರ ಆ.26 ಪೂ.10.ಗ ಸರಕಾರಿ ಸಂಯುಕ್ತ ಫ್ರೌಢಶಾಲೆ ಮೂಡುಗಿಳಿಯಾರು ಇಲ್ಲಿ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಚಿಂತಕಿ , ಪರಿಸರಸ್ನೃಹಿ ಅಭಿಯಾನಗಳ ಮೂಲಕ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಕಲ್ಪನಾ ಭಾಸ್ಕರ್ ಗೋಪಾಡಿ ಭಾಗವಹಿಸಲಿದ್ದಾರೆ.













Leave a Reply