
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬ್ರಹ್ಮಾವರ, ಜಿಲ್ಲಾ ಜನಜಾಗೃತಿ ವೇದಿಕೆ ಪಾಂಡೇಶ್ವರ ವಲಯ ಆಶ್ರಯದಲ್ಲಿ ಕೋಡಿ ಕನ್ಯಾಣ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಯೋಜನೆಯ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಮುಖ್ಯ ಶಿಕ್ಷಕ ಗಣೇಶ.ಜಿ ಇವರು ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗದಂತೆ ದೃಢ ನಿರ್ಧಾರ ಮಾಡಬೇಕಾಗಿದೆ,ವಿದ್ಯಾರ್ಥಿಗಳಲ್ಲಿ ಆತ್ಮಗೌರವ, ಗುರಿ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯ. ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು ಇದನ್ನು ಕಾಪಾಡಿಕೊಂಡು ಹೋಗಾ ಬೇಕಾಗಿದ್ದು ವಿದ್ಯಾರ್ಥಿಗಳ ಹೊಣೆ ಇದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜನಜಾಗ್ರತೆ ವೇದಿಕೆಯ ಅಧ್ಯಕ್ಷ ಅಚ್ಯುತ್ ಪೂಜಾರಿ ರವರು ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸಬೇಕು.
ಕಾರ್ಯಕ್ರಮದಲ್ಲಿ ಕೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ್ ಮೆಂಡನ್, ಲಕ್ಷ್ಮೀ ಸೋಮ ಬಂಗೇರ ಕೋಡಿ ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ, ಹೈಸ್ಕೂಲ್ ವೀಭಾಗದ ಮುಖ್ಯೋಪಾಧ್ಯಾಯ ರಾಧಿಕಾ , ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸಿತರಿದ್ದರು. ಸೇವಾ ಪ್ರತಿನಿಧಿಯವರಾದ ಮಾಲತಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಂಡೇಶ್ವರ ವಲಯದ ಮೇಲ್ವಿಚಾರಕಿ ಜಯಲಕ್ಷ್ಮಿ ನಿರೂಪಣೆಗೈದರು. ಹೈಸ್ಕೂಲ್ ವೀಭಾಗದ ಮುಖ್ಯೋಪಾಧ್ಯಾಯ ರಾಧಿಕಾ ವಂದಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬ್ರಹ್ಮಾವರ, ಜಿಲ್ಲಾ ಜನಜಾಗೃತಿ ವೇದಿಕೆ ಪಾಂಡೇಶ್ವರ ವಲಯ ಆಶ್ರಯದಲ್ಲಿ ಕೋಡಿ ಕನ್ಯಾಣ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇತ್ತೀಚಿಗೆ ಜರಗಿತು.













Leave a Reply