Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹೆಸಕುತ್ತೂರು ಪ್ರಾಥಮಿಕ ಶಾಲೆ: ವಲಯ ಮಟ್ಟದ ಖೋ ಖೋ ಪಂದ್ಯಾಟ

ಕೋಟ: ಮಕ್ಕಳ ದೈಹಿಕ ಹಾಗೂ ಮಾನಸಿಕ ಸದ್ರಢತೆಗೆ ಕ್ರೀಡೆಯು ತುಂಬಾ ಮಹತ್ವದ ಕೊಡುಗೆ ನೀಡುತ್ತದೆ. ಕ್ರೀಡಾ ಸ್ಫೂರ್ತಿಯ ಆಟದೊಂದಿಗೆ ಪಂದ್ಯಾವಳಿ ಯಶಸ್ವಿಯಾಗಲಿ” ಎಂದು ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪಲ್ಲವಿ ಕುಲಾಲ ನುಡಿದರು. ಅವರು ಹೆಸಕುತ್ತೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಖೋ ಖೋ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ ಎನ್, ನಿವೃತ್ತ ಗುಪ್ತಚರ ಇಲಾಖೆಯ ಅಧಿಕಾರಿ ಆನಂದ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಅಶೋಕ ಮೊಗವೀರ, ತಾಲೂಕು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಕುಸುಮಾಕರ ಶೆಟ್ಟಿ , ಕುಂದಾಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ ಕುಮಾರ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಮುಖ್ಯ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಶರತ್ ಕುಮಾರ ಶೆಟ್ಟಿ, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸದಾರಾಮ ಶೆಟ್ಟಿ ತೆಕ್ಕಟ್ಟೆ, ಸ್ಥಳೀಯ ದಾನಿಗಳಾದ ಕೊರಗಯ್ಯ ಶೆಟ್ಟಿ, ಹುಣಸೆಮಕ್ಕಿ ಸಮೂಹ ಸಂಪನ್ಮೂಲ ವ್ಯಕ್ತಿ ವಸಂತ್, ಶಾಲಾ ಸಹ ಶಿಕ್ಷಕರಾದ ಜಯಲಕ್ಷ್ಮಿ ಬಿ, ಜಯರಾಮ ಶೆಟ್ಟಿ, ವಿಜಯಾ ಆರ್, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಗೌರವ ಶಿಕ್ಷಕಿ ಮಧುರಾ ಉಪಸ್ಥಿತರಿದ್ದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೀಜಾಡಿಯ ವಿದ್ಯಾರ್ಥಿಗಳು ಬಾಲಕರು ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು. ಬಾಲಕರ ವಿಭಾಗದ ದ್ವಿತೀಯ ಸ್ಥಾನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಮಾಸೆಬೈಲು ಹಾಗೂ ಬಾಲಕಿಯರ ವಿಭಾಗದ ದ್ವಿತೀಯ ಸ್ಥಾನವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಯಡಾಡಿ ಮತ್ಯಾಡಿಯ ವಿದ್ಯಾರ್ಥಿಗಳು ಪಡೆದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ಎಂ ವಂದಿಸಿದರು. ಶಿಕ್ಷಕ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಹೆಸಕುತ್ತೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಖೋ ಖೋ ಪಂದ್ಯಾಟವನ್ನು ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪಲ್ಲವಿ ಕುಲಾಲ ಉದ್ಘಾಟಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ ಎನ್, ನಿವೃತ್ತ ಗುಪ್ತಚರ ಇಲಾಖೆಯ ಅಧಿಕಾರಿ ಆನಂದ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಅಶೋಕ ಮೊಗವೀರ, ತಾಲೂಕು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಕುಸುಮಾಕರ ಶೆಟ್ಟಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *