Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪರಿಸರದಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ಸೃಷ್ಠಿಸಿ- ಆನಂದ್ ಸಿಕುಂದರ್ ಕರೆ
ಪಂಚವರ್ಣ ಸಂಸ್ಥೆಯ 177ನೇ ವಾರದ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನದಲ್ಲಿ ಹೇಳಿಕೆ

ಕೋಟ: ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆ ಅತಿ ಹೆಚ್ಚಾಗಿ ವಿಜೃಂಭಿಸಿಕೊಳ್ಳುತ್ತಿದೆ ಇದರಿಂದ ಪರಿಸರಕ್ಕೆ ಸಾಕಷ್ಟು ಹಾನಿ ಸಂಭವಿಸುತ್ತಿದೆ ಇದರಿಂದ ಹೊರಬರಬೇಕಾದ ಅವಶ್ಯಕತೆ ಇದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.

ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್,ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು, ಜನತಾ ಸಂಸ್ಥೆ ಕೋಟ, ಕೋಟ ಆರಕ್ಷಕ ಠಾಣೆ. ಕರ್ನಾಟಕ ಪಶು ವೈದ್ಯಕೀಯ , ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಬೀದರ, ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರು ರಾಷ್ಟ್ರೀಯ ಸೇವಾ ಯೋಜನೆ , ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಲಿಮಿಟೆಡ್ , ಕೋಟ ಪಡುಕರೆ ಲಕ್ಷ್ಮೀಸೋಮಬಂಗೇರ ಸ.ಪ್ರ ಕಾಲೇಜು ಕೋಟ ಗ್ರಾ.ಪಂ , ಘನ ಹಾಗೂ ದ್ರವ ತ್ಯಾಜ್ಯ ಘಟಕ ಇವರುಗಳ ಸಹಯೋಗದಲ್ಲಿ ಸಮಾಜ ಸೇವಕ ಆನಂದ್ ಸಿ ಕುಂದರ್ ಅಮೃತಮಹೋತ್ಸವ ವರ್ಷಾಚರಣೆ ಪ್ರಯುಕ್ತ 177ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ಕಾರ್ಯಕ್ರಮ ಭಾನುವಾರ ಕೋಟ ಪಡುಕರೆಯಲ್ಲಿ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಇಂದು ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಬಳಕೆ ಅತಿ ಹೆಚ್ಚಾಗಿ ಬಳಸುತ್ತಿದ್ದೇವೆ ಅದು ದಿನಸಿ ಪದಾರ್ಥಗಳಿಂದ ಹಿಡಿದು ನಾವು ಸೇವಿಸುವ ಆಹಾರದವರೆಗೂ ಬಳಕೆ ವಿಪರೀತವಾಗಿದೆ ಇದು ನಮ್ಮದೇಹಕ್ಕೆ ವಿವಿಧ ರೋಗಗಳಿಗೆ ಆಹ್ವಾನಿಸಿದಂತೆ ಅಲ್ಲದೆ ಪ್ರಕೃತಿಯ ಮೇಲೂ ಅತ್ಯಾಚಾರ ನಡೆಸಿದಂತೆ ಇದಕ್ಕೆ ಇಂದೆ ಕಡಿವಾಣ ಹಾಕಬೇಕಾಗಿ ಕಂಡ ಕಂಡಲ್ಲಿ ಪ್ಲಾಸ್ಟಿಕ್ ಎಸೆಯುವ ಮನಸ್ಥಿತಿಗೆ ಅಂತ್ಯ ಕಾಣಿಸಬೇಕು, ಸ್ವಸ್ಥ ಸಮಾಜ ನಿರ್ಮಾದಲ್ಲಿ ಸಂಘ ಸಂಸ್ಥೆಗಳ ಪಾತ್ರ ಹಿರಿದಾದದ್ದು ಈ ದಿಸೆಯಲ್ಲಿ ನನ್ನ ಹುಟ್ಟುಹಬ್ಬವನ್ನು ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮೀಸಲಿಸಿದ ಪಂಚವರ್ಣ ಸಂಸ್ಥೆ ಹಾಗೂ ಇತರ ಸಂಘಟನೆಗಳು ಆಭಾರಿಯಾಗಿದ್ದೇನೆ ಎಂದರು. ಈ ಅಭಿಯಾನದಲ್ಲಿ ವಿಶೇಷವಾಗಿ ಕೋಟ ಆರಕ್ಷಕ ಠಾಣೆಯ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿ ಅಭಿಯಾನಕ್ಕೆ ಹೊಸ ಆಯಾಮ ತಂದಿಟ್ಟರು.

ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ,ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ,,ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರು ಇದರ ಉಪನ್ಯಾಸಕ ಶ್ರೀನಿವಾಸ್, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಲಿಮಿಟೆಡ್ ಇದರ ನಿರ್ದೇಶಕ ಸುದೀನ ಕೋಡಿ, ಕೋಟ ಜನತಾ ಸಂಸ್ಥೆ ಮ್ಯಾನೇಜರ್ ಶ್ರೀನಿವಾಸ್ ಕುಂದರ್, ಕೋಟ ಗ್ರಾ.ಪಂ ಉಪಾಧ್ಯಕ್ಷ ಪಾಂಡು ಪೂಜಾರಿ, ಎಸ್ ಎಲ್ ಆರ್ ಎಂ ಘಟಕದ ಲೋಲಾಕ್ಷಿ ಕೊತ್ವಾಲ್ , ಕೊಲ್ಲೂರು ದೇವಸ್ಥಾನ ಟ್ರಸ್ಟಿ ಕೆ.ಪಿ ಶೇಖರ್, ಪಂಚವರ್ಣ ಸಂಸ್ಥೆ ಕಾರ್ಯದರ್ಶಿ ಸುಧೀಂದ್ರ ಜೋಗಿ, ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತ ಪೂಜಾರಿ, ಹಂದಟ್ಟು ಮಹಿಳಾ ಬಳಗ ಕೋಟ ಅಧ್ಯಕ್ಷೆ ಪುಷ್ಭಾ ಕೆ , ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರವನ್ನು ಸುಜಾತ ಬಾಯರಿ ನಿರೂಪಿಸಿ ವಂದಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಸಮಾಜ ಸೇವಕ ಆನಂದ್ ಸಿ ಕುಂದರ್ ಅಮೃತಮಹೋತ್ಸವ ವರ್ಷಾಚರಣೆ ಪ್ರಯುಕ್ತ 177ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ಕಾರ್ಯಕ್ರಮ ಭಾನುವಾರ ಕೋಟ ಪಡುಕರೆಯಲ್ಲಿ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಆನಂದ್ ಸಿ ಕುಂದರ್ ಮಾತನಾಡಿದರು.

Leave a Reply

Your email address will not be published. Required fields are marked *