
ಕೋಟ : ಜ್ಞಾನಪೀಠ ಪುರುಸ್ಕೃತ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಜಲಾನಯನ ಅಭಿವೃದ್ಧಿ ಇಲಾಖೆ, ಮೀನುಗಾರಿಕ ಇಲಾಖೆ, ಸ್ಕಡ್ ವೆಸ್ ಸಂಸ್ಥೆ, ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಣೂರು-ಪಡುಕೆರೆ,ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪೆನಿ ಲಿಮಿಟೆಡ್ ಆಶ್ರಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಶಿಬಿರಾರ್ಥಿಗಳು ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿ, ಆರ್ಟ್ ಗ್ಯಾಲರಿ, ಅಂಗನವಾಡಿ, ಕಿರು ಸಭಾಂಗಣ, ಗ್ರಂಥಾಲಯ, ಕಾರಂತರ ವಿಶೇಷ ಛಾಯಚಿತ್ರ, ಸಂಗೀತ ಕಾರಂಜಿ ವೀಕ್ಷಿಸಿದರು.
ಕಾರಂತರ ಥೀಮ್ ಪಾರ್ಕ್ನಲ್ಲಿ ನಡೆಯುವ ಸಾಹಿತ್ಯಿಕ- ಸಾಂಸ್ಕೃತಿಕ ಕಾರ್ಯಗಳು ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಶ್ರೀಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪೆನಿ ಲಿಮಿಟೆಡ್ನ ಸುದಿನ ಪೂಜಾರಿ, ಶಿಕ್ಷಕ ವೃಂದದವರು, ಮತ್ತಿತ್ತರು ಉಪಸ್ಥಿತರಿದ್ದರು.














Leave a Reply