• Tue. May 14th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ

ByKiran Poojary

Aug 31, 2023

ಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ ಎಲ್ ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆ
ಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ ಪ್ರಮಾಣದ ತ್ಯಾಜ್ಯ ಸುಟ್ಟು ಭಸ್ಮವಾಗಿದೆ.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಪುತ್ರನ್ ಕೋಟ ಆರಕ್ಷಕ ಠಾಣೆ ಹಾಗೂ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಿದ್ದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಅಗ್ನಿಶಾಮಕ ದಳ ಮಾಹಿತಿ ನೀಡಿದರು.

ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಅಗ್ನಿಶಾಮಕ ದಳ ಬೆಂಕಿ ಆರಿಸುವಲ್ಲಿ ಯಶಸ್ವಿಯಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಸದಸ್ಯರು,ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥರು, ಸ್ಥಳೀಯರು ಬೆಂಕಿ ಆರಿಸುವಲ್ಲಿ ಸಹಕರಿಸಿದರು.

Leave a Reply

Your email address will not be published. Required fields are marked *