
ಕೋಟ: ಆರ್ಥಿಕ ಅಭಿವೃದ್ಧಿಯ ಪ್ರಯೋಜನ ಫಲವನ್ನು ಸಾಮಾನ್ಯ ಜನರು ಪಡೆಯ ಬೇಕಾದರೆ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸಾಮರ್ಥ್ಯ ವೃದ್ಧಿ ಮತ್ತು ಮೃದು ಕೌಶಲ್ಯತೆಗಳಿಗೆ ಸಂಬಂಧಿಸಿದ ತರಬೇತಿಯನ್ನು ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳುವ ಅವಶ್ಯಕತೆಯಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಕಾಲೇಜಿನ ಐ.ಕ್ಯೂ.ಎ.ಸಿ. ಮತ್ತು ಉದ್ಯೋಗ ಮಾಹಿತಿ ಕೋಶವು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ತರಬೇತಿಯ ಪ್ರಯೋಜನ ಪಡೆದುಕೊಂಡು, ಆತ್ಮವಿಶ್ವಾಸ ಹೆಚ್ಚಿಸಿ ಕೊಳ್ಳಲು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಕುಂದರ್ ಕರೆನೀಡಿದರು.
ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆ ಇಲ್ಲಿ 20ಗಂಟೆಗಳ ಅeಡಿಣiಜಿiಛಿಚಿಣe ಅouಡಿse ನ್ನು ಸೆ.1 ರಿಂದ 12ರವೆಗೆ ಹಮ್ಮಿಕೊಂಡ ಕಾರ್ಯಕ್ರಮವನ್ನು ಆನಂದ್ ಸಿ ಕುಂದರ್ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ರಾಕಿ ಡಿಸೋಜ ಸಾಮಾನ್ಯ ಇಂಗ್ಲೀಷ್ ಮೇಲೆ ತರಬೇತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಸುನೀತ ವಿ ವಹಿಸಿ, ಸಾಮಾನ್ಯ ಪದವಿ ಶಿಕ್ಷಣದ ಮೂಲಕವೇ ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆಯುವಂತೆ ಮಾಡುವ ಸ್ವದುದ್ದೇಶದಿಂದ ಈ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಅದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದು ಕೊಳ್ಳಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ಶಂಕರ ನಾಯ್ಕ ಬಿ ಮತ್ತು ಉದ್ಯೋಗ ಮಾಹಿತಿ ಕೋಶದ ಸಂಚಾಲಕರಾದ ಡಾ. ಸುಬ್ರಮಣ್ಯ ಎ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂತಿಮ ಬಿ.ಎವಿದ್ಯಾರ್ಥಿನಿ ಅಶ್ವಿತಾ ನಿರೂಪಿಸಿದರು. ಡಾ. ಸುಬ್ರಮಣ್ಯ.ಎ ಸ್ವಾಗತಿಸಿದರು. ಅಂತಿಮ ಬಿ.ಎ. ವಿದ್ಯಾರ್ಥಿನಿ ಕು. ಫಾತಿಮಾ ಝಾಹಿರಾ ವಂದಿಸಿದರು. ಕಾರ್ಯಕ್ರಮದಲ್ಲಿ ಡಾ. ಮನೋಜ ಕುಮಾರ್ ಎಂ, ರಾಜಣ್ಣಎಂ, ಮುರಳಿಎಂ.ಜಿ ಹಾಗೂ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡರು.
ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆ ಇಲ್ಲಿ 20ಗಂಟೆಗಳ ಅeಡಿಣiಜಿiಛಿಚಿಣe ಅouಡಿse ನ್ನು ಸೆ.1 ರಿಂದ 12ರವೆಗೆ ಹಮ್ಮಿಕೊಂಡ ಕಾರ್ಯಕ್ರಮವನ್ನು ಆನಂದ್ ಸಿ ಕುಂದರ್ ಉದ್ಘಾಟಿಸಿ ಮಾತನಾಡಿದರು.
Leave a Reply