ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬ್ರಹ್ಮಾವರ ತಾಲೂಕು, ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಕೋಟ ವಲಯದ ಕೋಟತಟ್ಟು ಕಾರ್ಯಕ್ಷೇತ್ರದ ಶ್ರೀ ಅಮೃತೇಶ್ವರಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಕೋಟ್ಟತಟ್ಟು ಪಡುಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಹಮ್ಮಿಕೊಂಡಿತು. ಕಾರ್ಯಕ್ರಮವನ್ನು ಶ್ರೀ.ಕ್ಷೇ.ಧ.ಗ್ರಾ.ಯೋ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ ಉದ್ಘಾಟಿಸಿ ಮಾತನಾಡಿ ಒಂದು ಕುಟುಂಬ ಅಭಿವೃದ್ದಿಯಾಗಬೇಕಾದರೆ ಮಹಿಳೆಯ ಪಾತ್ರ ಅತ್ಯಂತ ಮಹತ್ವದ ಆಗಿರುತ್ತದೆ, ಆದ್ದರಿಂದ ಮಹಿಳೆಯರು ಸ್ವಂತ ಉದ್ಯೋಗ ಮಾಡಿ ಸ್ವಾವಲಂಬಿಗಳಾಗಿ ಬದುಕಬೇಕು ಕಾಣಬೇಕು ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಮುಖ್ಯೋಪಾಧ್ಯಾಯನಿ ಜಾನಕಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ವಲಯದ ಅಧ್ಯಕ್ಷ ಜಯರಾಮ್ ಶೆಟ್ಟಿ ಪ್ರತಿಯೊಂದು ಮಹಿಳೆಯು ಪರಾವಲಂಬಿಯಾಗದೆ ಸ್ವಂತ ಉದ್ಯೋಗ ಮಾಡಿ ತಮ್ಮ ಕಾಲ ಮೇಲೆ ತಾನು ನಿಲ್ಲುವಂತಾಗಬೇಕು ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಆರ್ಥಿಕ ಸವಲತ್ತುಗಳನ್ನು ನೀಡುತ್ತಾ ಬಂದಿದೆ ಇದೆಲ್ಲವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನವನ್ನು ನಡೆಸುವಂತೆ ಕರೆನೀಡಿದರು.
ರುಡ್ ಸೆಟ್ ಸಂಸ್ಥೆಯ ಹಿರಿಯ ಕಚೇರಿ ಸಹಾಯಕ ರವಿ, ಸ್ವ ಉದ್ಯೋಗದ ಬಗ್ಗೆ ಸಮಗ್ರವಾದ ಮಾಹಿತಿ ಹಾಗೂ ಸಂಸ್ಥೆಯಿಂದ ದೊರೆಯುವ ಸವಲತ್ತು, ತರಬೇತಿ, ಅವಕಾಶಗಳು, ಮಾರುಕಟ್ಟೆ, ಇನ್ನಿತರ ಸಮಗ್ರವಾಗಿ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ನೇತ್ರಾವತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಪುಷ್ಪಲತಾ ನಿರೂಪಿಸಿ, ಕೇಂದ್ರದ ಸದಸ್ಯರಾದ ಸುಜಾತಾ ಸ್ವಾಗತಿಸಿದರು.
ಸೇವಾಪ್ರತಿನಿಧಿ ಶ್ರೀಲಕ್ಷ್ಮಿ ವಂದಿಸಿದರು. 73 ಜನ ಸ್ವ ಉದ್ಯೋಗ ಆಕಾಂಕ್ಷಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿಕೋಟ ವಲಯದ ಕೋಟತಟ್ಟು ಕಾರ್ಯಕ್ಷೇತ್ರದ ಶ್ರೀ ಅಮೃತೇಶ್ವರಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಶ್ರೀ.ಕ್ಷೇ.ಧ.ಗ್ರಾ.ಯೋ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ ಉದ್ಘಾಟಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಮುಖ್ಯೋಪಾಧ್ಯಾಯನಿ ಜಾನಕಿ, ರುಡ್ ಸೆಟ್ ಸಂಸ್ಥೆಯ ಹಿರಿಯ ಕಚೇರಿ ಸಹಾಯಕ ರವಿ, ವಲಯದ ಮೇಲ್ವಿಚಾರಕಿ ನೇತ್ರಾವತಿ ಉಪಸ್ಥಿತರಿದ್ದರು.














Leave a Reply