ಕೋಟ: ಕೋಟ ಗ್ರಾಮ ಪಂಚಾಯತ್ನ ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಗ್ರಾಮ ಪಂಚಾಯತ್ ವತಿಯಿಂದ ಸುಮಾರು 10000 ಮೌಲ್ಯದ ಸ್ಪರ್ಧಾತ್ಮಕ ಪುಸ್ತಕಗಳು ಹಾಗೂ ಕ್ರೀಡಾ ಸಾಮಾಗ್ರಿಗಳನ್ನು ಸೋಮವಾರ ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ರವರು ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ರವರಿಗೆ ಹಸ್ತಾಂತರಿಸಿದರು.
ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಗ್ರಾಮ ಪಂಚಾಯತ್ನ ಸದಸ್ಯರು, ಉಸ್ತುವಾರಿ ಅಧಿಕಾರಿ ಡಾ.ಅನಿಲ್ ಕುಮಾರ್ , ಶಿಕ್ಷಣ ಫೌಂಡೇಶನ್ನ ಜಿಲ್ಲಾ ಶಿಕ್ಷಣ ಸಂಯೋಜಕಿ ರೀನಾ ಶೆಟ್ಟಿ ಸೇರಿದಂತೆ ಸಿಬ್ಬಂದಿಯವರು ಹಾಜರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು. ಲೆಕ್ಕ ಸಹಾಯಕ ಶೇಖರ್ ಸ್ವಾಗತಿಸಿದರು.ಕಾರ್ಯದರ್ಶಿ ಪೂರ್ಣಿಮಾ ಕೆ. ವಂದನಾರ್ಪಣೆಗೈದರು.
ಕೋಟ ಗ್ರಾ.ಪಂ ವತಿಯಿಂದ ಸ್ಪರ್ಧಾತ್ಮಕ ಪುಸ್ತಕಗಳು ಹಾಗೂ ಕ್ರೀಡಾ ಸಾಮಾಗ್ರಿಯನ್ನು ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ರವರಿಗೆ ಹಸ್ತಾಂತರಿಸಿದರು. ಹಸ್ತಾಂತರಿಸಿತು.














Leave a Reply