ಕೋಟ: ಕೋಟ ಗ್ರಾಮ ಪಂಚಾಯತಿನ 2022-23 ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮವು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಹಿಂದಿನ ಸಾಲಿನ ಲೆಕ್ಕಪತ್ರಗಳ ಮಂಡನೆ ಮಾಡಲಾಯಿತು. ಕಡತಗಳನ್ನು ಸಾರ್ವಜನಿಕರ ಸಮ್ಮುಖದಲ್ಲಿ ಮಂಡಿಸಿ, ಆಯ್ದ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ , ಉಪಾಧ್ಯಕ್ಷ ಪಾಂಡು ಪೂಜಾರಿ, ನೋಡಲ್ ಅಧಿಕಾರಿ ಕೋಟ ಪಶು ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ , ಜಮಾಬಂಧಿ ಸಹಾಯಕಿ ಜಲಜ ಕಾರ್ಯದರ್ಶಿ ಹಂದಾಡಿ ಹಾಗೂ ಅಂಗನವಾಡಿ ಹಿರಿಯ ಮೇಲ್ವಿಚಾರಕಿ ಭಾಗೀರಥಿ, ಪಂಚಾಯತ್ ರಾಜ್ ಇಲಾಖೆ ಸಹಾಯಕ ಇಂಜಿನಿಯರ್ ಲತೀಶ್, ಹಾಗೂ ಪಂಚಾಯತ್ ಸದಸ್ಯರು,ಸಿಬ್ಬಂದಿ ವರ್ಗದವರು ,ಗ್ರಾಮಸ್ಥರು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಲೆಕ್ಕ ಸಹಾಯಕ ಶೇಖರ್ ಸ್ವಾಗತಿಸಿದರು. ಕಾರ್ಯದರ್ಶಿ ಪೂರ್ಣಿಮಾ ವಂದಿಸಿದರು. ಬಾಪೂಜಿ ಸಿಬ್ಬಂದಿ ಮಿಥುನ್ ವರದಿ ಮಂಡಿಸಿದರು.
ಕೋಟ ಗ್ರಾಮ ಪಂಚಾಯತಿನ 2022-23 ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮವು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.














Leave a Reply