ಕೋಟ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರಕಾರದ ಉನ್ನತ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಲು ಸ್ಪೂರ್ತಿ ತುಂಬುವ ಉದ್ದೇಶದಿಂದ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ನಾಗರಿಕ ಸೇವೆ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಸಂಬಂಧಿಸಿದ ಪರೀಕ್ಷೆಗಳ ಮೇಲೆ ಮಾಹಿತಿ ಕಾರ್ಯಗಾರವನ್ನು ಇತ್ತೀಚಿಗೆ ಹಮ್ಮಿಕೊಂಡಿತು.
ಈ ಕಾರ್ಯಾಗಾರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಉತ್ತಮ ತರಬೇತಿ ಪಡೆದು ನಾಗರಿಕ ಸೇವೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇತರ ಸಾರ್ವಜನಿಕ ಹುದ್ದೆಗಳಿಗೆ ಸ್ಪರ್ಧಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಪ್ರೋ. ಸುನೀತ ವಿ. ರವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಉತ್ತಮ ಪ್ರಯತ್ನದಿಂದ ಉನ್ನತ ಸರಕಾರಿ ಹುದ್ದೆ ಪಡೆಯಲು ಸಾಧ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಕಾರ್ತಿಕ್, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುಬ್ರಮಣ್ಯ ಎ ನಡೆಸಿಕೊಟ್ಟರು.
ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ನಾಗರಿಕ ಸೇವೆ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಸಂಬಂಧಿಸಿದ ಪರೀಕ್ಷೆಗಳ ಮೇಲೆ ಮಾಹಿತಿ ಕಾರ್ಯಗಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.














Leave a Reply