ಕೋಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಕೋಟತಟ್ಟು ಗ್ರಾಮ ಪಂಚಾಯತ್, ಸಮುದಾಯ ಆರೋಗ್ಯ ಕೇಂದ್ರ ಕೋಟ, ಇವರ ಸಂಯುಕ್ತ ಆಶ್ರಯದಲ್ಲಿ ದಾನಗುಂದು ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಸಾಚಾರಣೆ ಪ್ರಯುಕ್ತ ಪೋಷಣ ಮಾಹ 2023 ಕಾರ್ಯಕ್ರಮವನ್ನು ದಾನಗುಂದು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು. ಕೋಟ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟತಟ್ಟು ಗ್ರಾ.ಪಂ ಉಪಾಧ್ಯಕ್ಷ ಸರಸ್ವತಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕೋಟತಟ್ಟು ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಎಚ್, ವಿದ್ಯಾ, ಕೋಟತಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಮೀನಾಕ್ಷಿ , ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆಯಾದ ಜಯಲಕ್ಷ್ಮೀ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಪೌಷ್ಠಿಕ ಆಹಾರ ಮೇಳ, ತರಕಾರಿಯಿಂದ ವಿವಿಧ ಕಲಾಕೃತಿಗಳು ಹಾಗೂ ರಂಗೋಲಿಯಲ್ಲಿ ಮೂಡಿದ ಇಲಾಖೆಯ ಯೋಜನೆಗಳು ಗಮನ ಸೆಳೆದವು.
ದಾನಗುಂದು ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣ ಮಾಹ 2023 ಕಾರ್ಯಕ್ರಮವನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟತಟ್ಟು ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಎಚ್, ವಿದ್ಯಾ, ಕೋಟತಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್ ಇದ್ದರು.














Leave a Reply