

ಕೋಟ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ವಿವೇಕ ವಿದ್ಯಾಸಂಸ್ಥೆಗಳು ಕೋಟ ಇದರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕುಮಟ್ಟದ ಪ.ಪೂ.ಕಾಲೇಜಿನ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಕೋಟ ವಿವೇಕ ಪ.ಪೂ.ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಉತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಸದಸ್ಯರಾದ ವಸಂತ ಶೆಟ್ಟಿ ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಸುಬ್ರಾಯ ಆಚಾರ್ಯ, ನ್ಯಾಯವಾದಿ ಶ್ಯಾಮಸುಂದರ ನಾೈರಿ ,ವಿದ್ಯಾಸಂಘದ ಜೊತೆ ಕಾರ್ಯದರ್ಶಿ ಪಿ. ಮಂಜುನಾಥ ಉಪಾಧ್ಯರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ್ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.
ಮುಖ್ಯೋಪಾಧ್ಯಾಯ ಜಗದೀಶ ಹೊಳ್ಳ, ಭಾಸ್ಕರ ಆಚಾರ್ಯ, ವೆಂಕಟೇಶ ಉಡುಪ ಉಪಸ್ಥಿತರಿದ್ದರು.
ಪ್ರೌಢಶಾಲಾ ಹಾಗೂ ಪ.ಪೂ.ಕಾಲೇಜಿನ ದೈಹಿಕ ಶಿಕ್ಷಕರಾದ ಜೀವನ್ ಕುಮಾರ್ ಶೆಟ್ಟಿ ಮತ್ತು ವಿಜಯಕುಮಾರ ಶೆಟ್ಟಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ ಧನ್ಯವಾದವನ್ನಿತ್ತರು. ಚಿತ್ರಪಾಡಿ ಶಾಲಾ ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ವಿವೇಕ ವಿದ್ಯಾಸಂಸ್ಥೆಗಳು ಕೋಟ ಇದರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕುಮಟ್ಟದ ಪ.ಪೂ.ಕಾಲೇಜಿನ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಕೋಟ ವಿವೇಕ ಪ.ಪೂ.ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಉತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
