

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ, ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಗೀತಾನಂದ ಫೌಂಡೇಶನ್ ಮಣೂರು, ಇದರ ಜಂಟಿ ಆಶ್ರಯದಲ್ಲಿಮ್ಯೂಚುವಲ್ ಫಂಡ್ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುನೀತ ವಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಸಂತ ತಂತ್ರಿಮ್ಯೂಚವಲ್ ಫಂಡ್ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಐ.ಕ್ಯೂ.ಎ.ಸಿ. ಸಂಚಾಕ ಡಾ. ಸುಬ್ರಮಣ್ಯ ಎ, ಗೀತಾನಂದಫೌಂಡೇಶನ ವೈಷ್ಣವಿ ರಕ್ಷಿತ್ ಕುಂದರ್, ಇತಿಹಾಸ ವಿಭಾಗದ ಮುಖ್ಯಸ್ಥರಾದ ರಾಜಣ್ಣಎಂ, ಗೀತಾನಂದ ಪೌಂಡೇಶ್‍ನ ಸಮಾಜಕಾರ್ಯ ವಿಭಾಗದ ರವಿಕಿರಣ್, ಕೋಟ ಗ್ರಾಮಪಂಚಾಯತ್ ಸದಸ್ಯ ಜಯರಾಮಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಶಂಕರನಾಯ್ಕ ಬಿ, ಸ್ವಾಗತಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿ ನಿಕ್ಷಮ್ಯಾ ವಂದಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಮುರಳಿಎಂ.ಜಿ ಕಾರ್ಯಕ್ರಮ ನಿರ್ವಹಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿಗಳು ಭಾಗವಹಿಸಿದರು.
ಲಕ್ಷ್ಮೀಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ, ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಗೀತಾನಂದ ಫೌಂಡೇಶನ್ ಮಣೂರು, ಇದರ ಜಂಟಿ ಆಶ್ರಯದಲ್ಲಿಮ್ಯೂಚುವಲ್ ಫಂಡ್ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.
