Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬಹುರೂಪಿ-2023 (ಸಾಧನೆಯ ಹೂಕಂಪನ) ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಟ: ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಸಾಹಿತಿ-ಶಿಕ್ಷಕ ನರೇಂದ್ರ ಕುಮಾರ್ ಕೋಟ ಇವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಬಹುರೂಪಿ-2023(ಸಾಧನೆಯ ಹೂಕಂಪನ) ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸೋಮಶೇಖರ್ ಶೆಟ್ಟಿ ಬಿಡುಗಡೆಗೊಳಿಸಿ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವವರ ಸಂಖ್ಯೆ ಸಮಾಜದಲ್ಲಿ ಹೆಚ್ಚಾದಾಗ ಸಾಧನೆ ಮಾಡಬೇಕೆನ್ನುವ ಮನಸ್ಸುಗಳು ಹೆಚ್ಚುತ್ತದೆ ಎಂದರು.

ಕಾರ್ಯಕ್ರಮದ ಸಂಚಾಲಕ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಪ್ರವರ್ತಕ ಆನಂದ್ ಸಿ ಕುಂದರ್ ಮಾತನಾಡಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕರೆಯಲ್ಲಿ ಸೆ. 24 ರಂದು ಬೆಳಿಗ್ಗೆ 9.30ರಿಂದ ನಡೆಯಲಿದ್ದು ಕಾರ್ಯಕ್ರಮವನ್ನು ನಾಡೋಜ ಡಾ.ಜಿ ಶಂಕರ್ ಉದ್ಘಾಟಿಸಲಿದ್ದು, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನಿಸಲಿದ್ದಾರೆ, ಕುಂದಾಪುರ ವಿಧಾನ ಸಭಾ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಆಶಯ ನುಡಿಗಳನ್ನಾಡಲಿದ್ದು, ಇನ್ನಿತರ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಶ್ರೀಕ್ಷೇತ್ರ ಅಮೃತೇಶ್ವರಿ ದೇವಸ್ಥಾನದ ಟ್ರಸ್ಟಿಗಳಾದ ಶ್ರೀ ಸುಬ್ರಾಯ್ ಆಚಾರ್ಯ, ಸುಶೀಲಾ ಸೋಮಶೇಖರ್, ಶಿಕ್ಷಕ ಸತೀಶ್ ವಡ್ಡರ್ಸೆ, ಸುಮುಖ ಶ್ಯಾಮಿಯನದ ಮಾಲಕ ಪ್ರಕಾಶ್ ಪೂಜಾರಿ, ಭಗತ್ ಸಿಂಗ್ ಯುವವೇದಿಕೆ ಕೋಟದ ಅಧ್ಯಕ್ಷ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಸಾಹಿತಿ-ಶಿಕ್ಷಕ ನರೇಂದ್ರ ಕುಮಾರ್ ಕೋಟ ಇವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಬಹುರೂಪಿ-2023 (ಸಾಧನೆಯ ಹೂಕಂಪನ) ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸೋಮಶೇಖರ್ ಶೆಟ್ಟಿ ಬಿಡುಗಡೆಗೊಳಿಸಿದರು.

Leave a Reply

Your email address will not be published. Required fields are marked *