ಕೋಟ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ವಡ್ಡರ್ಸೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಗುರುಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಪದಪ್ರದಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ.17ರಂದು ಮಧುವನ ದೇವಿ ಕಾಂಪ್ಲೆಕ್ಸ್ ಮುಂಭಾಗ ನಡೆಯಿತು.
ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷ ಲೋಕೇಶ್ ಕಾಂಚನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭ ಸಂಘದ ನೂತನ ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ, ಖಜಾಂಚಿಯಾಗಿ ಪ್ರವೀಣ್ ಪಿ.ಕೆ. ಅಧಿಕಾರ ವಹಿಸಿಕೊಂಡರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರಗಿತು.
ಬಾರಕೂರು ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷ ಅಣ್ಣಪ್ಪ ಪೂಜಾರಿ, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ಶಿರಿಯಾರ ಸಿ.ಎ.ಬ್ಯಾಂಕ್ ನಿರ್ದೇಶಕ ಸುರೇಂದ್ರ ಶೆಟ್ಟಿ ,ಸಂಘಟನೆಯ ಮಾಜಿ ಅಧ್ಯಕ್ಷೆ ಶಾರದಾ ಪೂಜಾರಿ, ಸಂಘದ ಗೌರವಾಧ್ಯಕ್ಷ ಕೆ.ಪಿ.ಕೋಟಿ ಪೂಜಾರಿ, ನಾಗರಾಜ ಪೂಜಾರಿ ಕೊಳ್ಳೆಬೈಲು, ಶೇಖರ್ ಪೂಜಾರಿ ಬೇಳೂರು, ಶಿರಿಯಾರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಭಾಸ್ಕರ್ ಪೂಜಾರಿ, ಶಿಕ್ಷಕ ಸತೀಶ್ ವಡ್ಡರ್ಸೆ ಮೊದಲಾದವರು ಉಪಸ್ಥಿತರಿದ್ದರು.ಕೋಟದ ಪಂಚವರ್ಣ ಮಹಿಳಾ ಮಂಡಲ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಜರಗಿತು.
ನಾರಾಯಣಗುರು ಬಿಲ್ಲವ ಸೇವಾ ಸಂಘ ವಡ್ಡರ್ಸೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತೋತ್ಸವ ಕಾರ್ಯಕ್ರಮ ಇತ್ತೀಚಿಗೆ ಜರಗಿತು.














Leave a Reply