
ಕೋಟ: ಅಂಧಕಾರ ಹೋಗಲಾಡಿಸುವ ಶಿಕ್ಷಕನಲ್ಲಿ ಸೌಜನ್ಯ ತುಂಬಿರಬೇಕು ವಿದ್ಯಾರ್ಥಿಗಳ ಭದ್ರ ಬುನಾದಿಗೆ ಶಿಕ್ಷಕರ ಪಾತ್ರ ಗಣನೀಯವಾದುದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ನಿರಂತರ ಮಾರ್ಗದರ್ಶನ ಮಾಡಬೇಕು. ಶಿಕ್ಷಕರ ಹೊಣೆಗಾರಿಕೆ ಬಹಳ ಮಹತ್ವದ್ದು. ಶಿಕ್ಷಕ ನಿರಂತರ ವಿದ್ಯಾರ್ಥಿ. ಶಿಕ್ಷಕರು ಪ್ರತಿದಿನ ವೃತ್ತಿಯನ್ನು ಗೌರವಿಸಬೇಕು ಎಂದು ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‍ನ ಅಧ್ಯಕ್ಷ ಅರವಿಂದ ಶರ್ಮ ಅಭಿಪ್ರಾಯಪಟ್ಟರು.
ಇತ್ತೀಚಿಗೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‍ನ ಅಧ್ಯಕ್ಷ ಅರವಿಂದ ಶರ್ಮ ಗುರುವಂದನೆ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಬೇಬಿ.ಬಿ ಶಾಂತರಾಮ್ ಪಾಂಡೇಶ್ವರ ಸಾಸ್ತಾನ, ಮತ್ತು ನಿವೃತ್ತ ಶಿಕ್ಷಕ ಪಾಂಡುರಂಗ ಶೆಟ್ಟಿ ಐರೋಡಿ, ಇವರುಗಳಿಗೆ ಗುರುವಂದನೆ ಸಲ್ಲಿಸಲಾಯಿತು. ರೋಟರಿ ಕ್ಲಬ್‍ನ ಗಣೇಶ್ ಜಿ ಪ್ರಾಸ್ತಾವನೆಗೈದರು. ಕ್ಲಬ್‍ನ ಪದಾಧಿಕಾರಿಗಳಾದ ಬಾಲಕೃಷ್ಣ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಕರುಣಾಕರ ಶೆಟ್ಟಿ ವಂದಿಸಿದರು.
ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಬೇಬಿ.ಬಿ ಶಾಂತರಾಮ್ ಪಾಂಡೇಶ್ವರ ಸಾಸ್ತಾನ, ಮತ್ತು ನಿವೃತ್ತ ಶಿಕ್ಷಕ ಪಾಂಡುರಂಗ ಶೆಟ್ಟಿ ಐರೋಡಿ, ಇವರುಗಳಿಗೆ ಗುರುವಂದನೆ ಸಲ್ಲಿಸಲಾಯಿತು. ಸಾಸ್ತಾನ ರೋಟರಿ ಕ್ಲಬ್‍ನ ಅಧ್ಯಕ್ಷ ಅರವಿಂದ ಶರ್ಮ ಇದ್ದರು.














Leave a Reply