
ಕೋಟ: ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿ ಕನ್ಯಾಣ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಉದ್ಘಾಟನಾ ಕಾರ್ಯಕ್ರಮ ಶನಿವಾರ ಕೋಡಿ ಶಾಲಾ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಗುಣ ಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಕಲಾಸಕ್ತಿ ಬೆಳೆಸಿಕೊಳ್ಳಬೇಕು ಆ ಮೂಲಕ ಪರಿಶುದ್ಧವಾದ ಯಕ್ಷಗಾನದಿಂದ ವಿದ್ಯಾರ್ಥಿಗಳ ಜೀವನದ ಮೌಲ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಉಡುಪಿ ಯಕ್ಷಗಾನ ಕಲಾಕೇಂದ್ರದ ಕಾರ್ಯದರ್ಶಿ ಮುರುಳಿ ಕಡೆಕಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶ್ವಮನ್ನಣೆ ಗಳಿಸಿದ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಮೂಲಕ ಸಾಕ್ಷಿಕರಿಸಬೇಕಾಗಿದೆ. ಯಕ್ಷಕಲೆಗೆ ಸರಿಸಾಟಿಯೇ ಇಲ್ಲ , ಪ್ರಸ್ತುತ ಕಾಲಘಟ್ಟದಲ್ಲಿ ಮೌಲ್ಯಯುತ ಯಕ್ಷಕಲೆಯನ್ನು ಧಾರೆ ಎರೆಯಬೇಕಾಗಿದೆ, ಎಂದರಲ್ಲದೆ ಇದನ್ನು ನೀರಿಕ್ಷಿಸಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳ ಮೂಲಕವೇ ಸಾಧ್ಯ ಆದರೆ ಇತ್ತೀಚಿಗಿನ ವಿದ್ಯಾಮಾನಗಳನ್ನು ಅವಲೋಕಿಸಿದರೆ ಆಂಗ್ಲಮಾಧ್ಯಮ ಹಾವಳಿಯಿಂದ ಕನ್ನಡ ಮಾಧ್ಯಮ ಶಾಲೆಗಳು ಅಳಿವಿನಂಚಿಗೆ ತಲುಪುತ್ತಿದೆ, ಇದನ್ನು ತಡೆಗಟ್ಟಬೇಕಾದರೆ ನಾವುಗಳು ಸರಕಾರಿ ಶಾಲೆಗಳ ಶಿಕ್ಷದ ಗುಣಮಟ್ಟ ಹಾಗೂ ಅಲ್ಲಿನ ವ್ಯವಸ್ಥೆಗಳನ್ನು ಬದಲಾಯಿಸಬೇಕಿದೆ ಇದಕ್ಕಾಗಿ ಶಾಸಕರು , ಉದ್ಯಮಿಗಳು ತಮ್ಮ ಕೊಡುಗೆಗಳನ್ನು ನೀಡಬೇಕು ಎಂದು ಹೇಳಿದರಲ್ಲದೆ ಇದರ ಭಾಗವಾಗಿ ಯಕ್ಷಕಲೆಗೆ ಸ್ಥಳೀಯ ಶಾಸಕರು ವಿಶೇಷ ಆಸಕ್ತಿ ವಹಿಸಿ ಅದರ ಅನುಷ್ಠಾನಗೊಳಿಸುವ ಮನಸ್ಥಿತಿ ಶ್ಲಾಘನೀಯವಾದದ್ದು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಇವರನ್ನು ಸನ್ಮಾನಿಸಲಾಯಿತು. ಯಕ್ಷ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಎಸ್.ವಿ ಭಟ್, ಉದ್ಯಮಿ ಶಿವ ಎಸ್ ಕರ್ಕೇರ, ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಭಾಕರ್ ಮೆಂಡನ್, ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಸದಸ್ಯರಾದ ಅಂತೋನಿ, ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಜಯಲಕ್ಷ್ಮಿ,ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ ಅಡಿಗ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಕ್ಷಯ್, ಕಲಾಕೇಂದ್ರದ ಸದಸ್ಯ ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು. ಶಾಲಾಮುಖ್ಯ ಶಿಕ್ಷಕಿ ರಾಧಿಕಾ ಸ್ವಾಗತಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ ವಂದಿಸಿದರು.
ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿ ಕನ್ಯಾಣ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಕಾರ್ಯಕ್ರಮದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಇವರನ್ನು ಸನ್ಮಾನಿಸಲಾಯಿತು.














Leave a Reply