• Sun. May 19th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಡಿ- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ByKiran Poojary

Sep 25, 2023

ಕೋಟ: ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ ರವರ ನೇತೃತ್ವದಲ್ಲಿ ಭಾರತದ ಸಂವಿಧಾನ ಪೀಠಿಕೆಯ ಪ್ರತಿಜಾÐ ವಿಧಿಯನ್ನು ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇತ್ತೀಚಿಗೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಅನುಪಮ, ಸರಕಾರಿ ಪದವಿ ಪೂರ್ವ ಕಾಲೇಜು, ಕೋಡಿ ಕನ್ಯಾಣ ಪ್ರಾಂಶುಪಾಲ ರಾಘವೇಂದ್ರ ಅಡಿಗ , ಕ್ಷೇತ್ರ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು, ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜಿನ ಮುಖ್ಯೋಪಾಧ್ಯಾಯರು, ಧ್ಯಾಪಕ ವೃಂದದವರು , ಶಾಲಾ ಮಕ್ಕಳ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕೋಡಿ ಪಂಚಾಯತ್‍ನಲ್ಲಿ ಭಾರತದ ಸಂವಿಧಾನ ಪೀಠಿಕೆಯ ಪ್ರತಿಜಾÐ ವಿಧಿಯನ್ನು ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ ನಡೆಯಿತು.

Leave a Reply

Your email address will not be published. Required fields are marked *