Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭೇಟಿಯಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಯವರನ್ನು ಮುಂಬೈಯಲ್ಲಿ ಭೇಟಿಯಾಗಿ ಚುನಾವಣೆ ಸಂದರ್ಭಲ್ಲಿ ಉಡುಪಿಗೆ ಆಗಮಿಸಿ ಪ್ರಚಾರ ನಡೆಸಿ ತನ್ನ ಗೆಲುವಿಗೆ ಸಹಕರಿಸಿದ ಏಕನಾಥ ಶಿಂಧೆ ಯವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

ಜನವರಿಯಲ್ಲಿ ನಡೆಯುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದಲ್ಲಿ ಭಾಗಿಯಾಗಲು ಮುಖ್ಯ ಮಂತ್ರಿಗಳನ್ನು ಆಹ್ವಾನಿಸಿದ ಯಶ್ ಪಾಲ್ ಸುವರ್ಣ, ಉಡುಪಿ ಜಿಲ್ಲೆಯ ಹಿಂದೂ ಕಾರ್ಯಕರ್ತರ ಬಹುದಿನಗಳ ಕನಸು ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಯನ್ನು ಹಿಂದುತ್ವದ ಭದ್ರ ಕೋಟೆ ಎನಿಸಿದ ಮಲ್ಪೆಯಲ್ಲಿ ಅತೀ ಶೀಘ್ರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬಗ್ಗೆ ಏಕನಾಥ ಶಿಂಧೆ ಯವರಿಗೆ ಮಾಹಿತಿ ನೀಡಿ ಪ್ರತಿಮೆಗೆ ಶಿಲಾನ್ಯಾಸ ನೆರವೇರಿಸಲು ಆಗಮಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಕಿಶನ್ ಶೆಟ್ಟಿ, ರಿತೇಶ್ ಶೆಟ್ಟಿ, ರಾಜೇಶ್ ಕುಂದರ್, ಅಮಿತ್ ಪೂಜಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *