Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಡಾ|| ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಅ. 3 ರಂದು ಕೋಟಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಅ. 3 ರಿಂದ 10ತನಕ ನಡೆಯಲಿರುವ ಡಾ|| ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮದ ಉದ್ಟಾಟನೆಯನ್ನು ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಅಕ್ಟೋಬರ್ 3ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದು. ಘನ ಉಪಸ್ಥಿತಿಯಲ್ಲಿ ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ನಲ್ನುಡಿ ಮಾತುಗಳನಾಡಲಿದ್ದು, , ಮುಖ್ಯ ಅತಿಥಿಗಳಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರ ಶಾಸಕ ವಿ ಸುನೀಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಯಶ್‍ಪಾಲ್ ಎ ಸುವರ್ಣ, ಮಾಜಿ ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *