
ಕೋಟ: ಲಕ್ಷ್ಮೀಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಇಲ್ಲಿ ಐ.ಕ್ಯೂ.ಎ.ಸಿ ಮತ್ತು ಉದ್ಯೋಗ ಮಾಹಿತಿ ಕೋಶವು ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರುವ ಪ್ರಶ್ನೆ ಪತ್ರಿಕೆ ಮೇಲೆ ಚರ್ಚೆ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಗಾರಕ್ಕೆ ಬೆಂಗಳೂರಿನ ವಿವಿಧ ಸ್ಪರ್ಧಾತ್ಮಕ ಸಂಸ್ಥೆಗಳಲ್ಲಿ ಸಂವಿಧಾನ ವಿಷಯದ ತರಬೇತುದಾರರಾದ ಸೈಯದ್ ತೌಸಿಪ್ ವಿದ್ಯಾರ್ಥಿಗಳಿಗೆ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಬರುವ ಪ್ರಶ್ನೆ ಪತ್ರಿಕೆಯ ಜಂಟಿ ಅಧಿವೇಶನದ ಮೇಲೆ ಉಪನ್ಯಾಸ ನೀಡಿದರು. ಅವರು ವಿದ್ಯಾರ್ಥಿಗಳಿಗೆ ಉನ್ನತ ಹುದ್ದೆಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ತೆಗೆದು ಕೊಂಡು ಸರಕಾರಿ ಸೇವೆಗೆ ಸೇರ್ಪಡೆಗೊಳ್ಳುವ ದಿಸೆಯಲ್ಲಿ ಕಾರ್ಯೋನ್ಮುಖ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುನೀತ ವಿ ವಹಿಸಿ, ಸಾಧನೆ ಮಾಡಬೇಕಾದರೆ ವಿದ್ಯಾರ್ಥಿಗಳ ಇಚ್ಛಾಶಕ್ತಿ ಮುಖ್ಯವಾಗಿತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ಪರ್ಧಾ ಸಾರಥಿ ಅಕಾಡೆಮಿಯ ನಿರ್ದೇಶಕರಾದ ಆದರ್ಶ್ ಮತ್ತು ಇತಿಹಾಸ ವಿಭಾದ ಮುಖ್ಯಸ್ಥರಾದ ರಾಜಣ್ಣ ಎಂ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಉದ್ಯೋಗ ಮಾಹಿತಿ ಕೋಶದ ಸಂಚಾಲಕರಾದ ಡಾ. ಸುಬ್ರಮಣ್ಯ ನಡೆಸಿದರು.
ಕೋಟ ಸರಕಾರಿ ಪದವಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ ಕಾರ್ಯಗಾರದಲ್ಲಿ ತರಬೇತುದಾರರಾದ ಸೈಯದ್ ತೌಸಿಪ್ ಮಾಹಿತಿ ನೀಡಿದರು.
Leave a Reply