
ಕೋಟ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಸಾಲಿಗ್ರಾಮ ಇವರ ಸಹಯೋಗದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಸೆ. 27 ಬುಧವಾರ ನ್ಯೂ ಕಾರ್ಕಡ ಶಾಲಾ ಮೈದಾನದಲ್ಲಿ ಬುಧವಾರ ನಡೆಯಿತು.
ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಅಧ್ಯಕ್ಷತೆ ವಹಿಸಿ ಧ್ವಜಾರೋಹಣಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನದ ಟ್ರಸ್ಟಿ ಗಣೇಶ್ ಕಿಣಿ ಧ್ವಜವಂದನೆ ಸ್ವೀಕರಿಸಿದರು. ಕ್ರೀಡಾಜ್ಯೋತಿಯನ್ನು ಮಣಿಪಾಲ್ ಮೀಡಿಯಾ ನೇಟ್ ವಕ್9 ಉಪಾಧ್ಯಕ್ಷ ಸತೀಶ್ ಶೆಣೈ ಬೆಳಗಿದರು.

ಮುಖ್ಯ ಅಭ್ಯಾಗತರಾಗಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನದ ಟ್ರಸ್ಟಿ ಕೆ.ಪಿ ಶೇಖರ್, ಸಾಲಿಗ್ರಾಮ ಪ.ಪಂ ಸದಸ್ಯರಾದ ರಾಜು ಪೂಜಾರಿ, ಗಿರೀಜಾ ಪೂಜಾರಿ, ಸಂಜೀವ ದೇವಾಡಿಗ, ಗಣೇಶ್ , ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ, ತಾಲೂಕು ದೈಹಿಕ ಪರಿವೀಕ್ಷಕಿ ಪದ್ಮಾವತಿ, ಕಾರ್ಕಡ ಕ್ಲಸ್ಟರ್ ಸಿಆರ್‍ಪಿ ಸವಿತಾ, ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಪಿ,ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಶಾಲೆಯ ಮಹಾಪೋಷಕ ಕೃಷ್ಣ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಭು ಭಟ್ , ಸ್ಥಳೀಯ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ಈ ಮೊದಲು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಿಂದ ಕ್ರೀಡಾಜ್ಯೋತಿಯನ್ನು ಕರೆತರಲಾಯಿತು.
ವಿದ್ಯಾರ್ಥಿಗಳ ಪಥಸಂಚಲ,ವಿವಿಧ ರೀತಿಯ ಕ್ರೀಡಾ ಚಟುವಟಿಕೆಗಳು ನಡೆದವು ಕಾರ್ಕಡ ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ್ ಕಾಮತ್ ಸ್ವಾಗತಿಸಿದರು.ಕಾರ್ಯಕ್ರಮವನ್ನು ದೈಹಿಕ ಶಿಕ್ಷಕರಾದ ಸತೀಶ್ಚಂದ್ರ ಶೆಟ್ಟಿ ಹಾಗೂ ಕೃಷ್ಣ ಆಚಾರ್ ನಿರೂಪಿಸಿದರು.
ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಸಾಲಿಗ್ರಾಮ ಇವರ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟವನ್ನು Áಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಉದ್ಘಾಟಿಸಿದರು. ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನದ ಟ್ರಸ್ಟಿ ಕೆ.ಪಿ ಶೇಖರ್,ಸಾಲಿಗ್ರಾಮ ಪ.ಪಂ ಸದಸ್ಯರಾದ ರಾಜು ಪೂಜಾರಿ, ಕಾರ್ಕಡ ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ್ ಕಾಮತ್ ಮತ್ತಿತರರು ಇದ್ದರು.
Leave a Reply