Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಸಹಕಾರಿ ವ್ಯವಸಾಯಕ ಸಂಘದ 66ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
ಶೇ.15% ಡಿವಿಡೆಂಡ್ ಘೋಷಣೆ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 66ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24ರ ಭಾನುವಾರ ವಿವೇಕ ಪದವಿ ಪೂರ್ವ ಕಾಲೇಜು, ಕೋಟ ಇದರ ಮಹಾತ್ಮಾ ಗಾಂಧಿ ಸಭಾ ಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಅಧ್ಯಕ್ಷತೆ ವಹಿಸಿ ವರದಿಯನ್ನು ವಾಚಿಸಿ, ಸಂಘದ 2022-23ನೇ ಸಾಲಿನ ಸಂಘವು 13 ಶಾಖೆಗಳನ್ನು ಹೊಂದಿ ಉತ್ತಮ ಪ್ರಗತಿ ಸಾಧಿಸಿ, ರೂ.201.04 ಕೋಟಿ ಠೇವಣಿ, ರೂ.144.90 ಕೋಟಿ ಸಾಲ ಹೊರಬಾಕಿಯಿದ್ದು, ವರದಿ ಸಾಲಿನಲ್ಲಿ ರೂ.813 ಕೋಟಿ ವ್ಯವಹಾರ ಮಾಡಿ ರೂ.5.17ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15ರ ಡಿವಿಡೆಂಡ್ ಘೋಷಿಸಿರುವುದಾಗಿ ಸಭೆಗೆ ತಿಳಿಸಿದರು.

ಇದೇ ವೇಳೆ ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ, ಗೀತಾನಂದ ಪೌಂಡೇಶನ್, ಕೋಟ ಮತ್ತು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ಅಮೃತೇಶ್ವರಿ ಎಜ್ಯುಕೇಶನ್ ಟ್ರಸ್ಟ್ ಕುಂದಾಪುರ ರೂರಲ್ ಆರ್ಯುವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಆಶ್ರಯದಲ್ಲಿ ನಡೆದ ಉಚಿತ ಆರ್ಯುವೇದ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಔಷಧ ವಿತರಣೆ ,ಪ್ರಸಾದ್ ನೇತ್ರಾಲಯ, ಉಡುಪಿ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಪೆÇರೆ ಶಸ್ತ್ರ ಚಿಕಿತ್ಸಾ ಶಿಬಿರ ಅಡಿಕೆ ಸಸಿಗಳ ನರ್ಸರಿ, ಸಕಲ ಕೃಷಿ ಉಪಕರಣಗಳ ಮಾರಾಟ ಮಳಿಗೆಯನ್ನು ಗೀತಾನಂದ ಪೌಂಡೇಶನ್, ಕೋಟ ಇದರ ಪ್ರವರ್ತಕರಾದ ಆನಂದ ಸಿ. ಕುಂದರ್ ಉದ್ಘಾಟಿಸಿದರು.

ಸಭೆಯಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ. ದಿನೇಶ ಗಾಣಿಗ, 2022-23ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಉಡುಪಿ ತಾಲೂಕು ಮಟ್ಟದ ಭತ್ತದ ಬೆಳೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಭಾಸ್ಕರ ಶೆಟ್ಟಿ, 2021-22ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ವೈಜ್ಞಾನಿಕ ಯಂತ್ರೋಪಕರಣಗಳ ವಿಭಾಗದಲ್ಲಿ ಪ್ರಶಸ್ತಿ ಪಡೆದ ಲಕ್ಷ್ಮಿ ಇವರನ್ನು ಅಭಿನಂದಿಸಲಾಯಿತು.

ಐಡಿಯಲ್ ಪ್ಲೇ ಅಭಾಕಸ್ ಅಂತರಾಷ್ಟ್ರೀಯ ಮಟ್ಟದ ಅಭಾಕಸ್ ಮತ್ತು ಮೆಂಟಲ್ ಅರ್ಥಮೇಟಿಕ್ ಕಾಂಪಿಟಿಷನ್ ವಲ್ಡ್ ಸಿಟಿ ಕಪ್-23ರಲ್ಲಿ ಬೆಳ್ಳಿ ಪದಕ ಪಡೆದ ಆದಿತ್ಯ ಆರ್., 2022-2023ನೇ ಸಾಲಿನ ಶೈಕ್ಷಣಿಕ ವರ್ಷದ ಬಿ.ಬಿ.ಎ. ಪದವಿ ಪರೀಕ್ಷೆಯಲ್ಲಿ 5ನೇ ರ್ಯಾಂಕ್ ಗಳಿಸಿದ ಕುಮಾರಿ ಮಹಾಲಕ್ಷ್ಮಿ ಜಿ. ಮತ್ತು 2022-2023ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 4ನೇ ರ್ಯಾಂಕ್ ಗಳಿಸಿದ ಸಾತ್ವಿಕ್ ಆರ್. ಇವರಿಗೆ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು.

ಹಿರಿಯ ಸದಸ್ಯರುಗಳನ್ನು ,ಸಂಘದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ವ್ಯವಸ್ಥಾಪಕ ಪಿ. ಶೇಖರ ಮರಕಾಲ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಸಂಘದಲ್ಲಿ ಅತ್ಯುತ್ತಮ ವ್ಯವಹಾರ ನಡೆಸಿದ ಶಾಖೆಗಳನ್ನು ಘೋಷಿಸಲಾಯಿತು. ಸಂಘದ ಕಾರ್ಯವ್ಯಾಪ್ತಿಯ ಶಾಲೆಗಳ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಪುರಸ್ಕರಿಸಲಾಯ್ತು. ಅಂಗವಿಕಲ ದತ್ತಿನಿಧಿ ವಿತರಿಸಲಾಯ್ತು.

ವಿವೇಕ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಜಗದೀಶ ನಾವಡ, ನಿವೃತ್ತ ಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ, ಮಣೂರು ,ರೋಟರಿ ಸಹಾಯಕ ಗರ್ವನರ್ ನರಸಿಂಹ ಪ್ರಭು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇದರ ಅಧ್ಯಕ್ಷ ದೇವಪ್ಪ ಪಟಗಾರ್, ಸುಬ್ರಾಯ ಮಯ್ಯ, ಕುಂದಾಪುರ ರೂರಲ್ ಆರ್ಯುವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ಐತಾಳ್, ಪ್ರಸಾದ್ ನೇತ್ರಾಲಯದ ವೈದ್ಯರಾದ ಡಾ. ವೃಂದಾ ,ಸಂಘದ ಉಪಾಧ್ಯಕ್ಷ ಜಿ. ರಾಜೀವ ದೇವಾಡಿಗ, ನಿರ್ದೇಶಕರುಗಳಾದ ಕೆ. ಉದಯ ಕುಮಾರ್ ಶೆಟ್ಟಿ, ಡಾ. ಕೆ. ಕೃಷ್ಣ ಕಾಂಚನ್, ರವೀಂದ್ರ ಕಾಮತ್, ಮಹೇಶ ಶೆಟ್ಟಿ, ರಾಜೇಶ್ ಉಪಾಧ್ಯ, ಗೀತಾ ಶಂಭು ಪೂಜಾರಿ, ನಾಗರಾಜ ಹಂದೆ, ಪ್ರೇಮಾ ಎಸ್. ಪೂಜಾರಿ, ರಂಜಿತ್ ಕುಮಾರ್, ರಶ್ಮಿತಾ, ಭಾಸ್ಕರ ಶೆಟ್ಟಿ, ಕೆ. ಶ್ರೀಕಾಂತ ಶೆಣೈ ಮತ್ತು ಅಚ್ಯುತ ಪೂಜಾರಿ ಇವರು ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಟಿ. ಮಂಜುನಾಥbಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಕುಮಾರಿ ನಿಶಾ ಪ್ರಾರ್ಥಿಸಿದರು. ಸಂಘದ ಸಿಬ್ಬಂದಿ ಶಾಲಿನಿ ಹಂದೆ ಕಾರ್ಯಕ್ರಮ ನಿರೂಪಿಸಿದರು.

ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 66ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಹಿರಿಯ ಸದಸ್ಯರುಗಳನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ವಿವೇಕ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಜಗದೀಶ ನಾವಡ, ನಿವೃತ್ತ ಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ, ಮಣೂರು ,ರೋಟರಿ ಸಹಾಯಕ ಗರ್ವನರ್ ನರಸಿಂಹ ಪ್ರಭು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇದರ ಅಧ್ಯಕ್ಷ ದೇವಪ್ಪ ಪಟಗಾರ್ ಇದ್ದರು.

Leave a Reply

Your email address will not be published. Required fields are marked *