• Fri. May 10th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಆಶ್ರಯದಲ್ಲಿ
ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ

ByKiran Poojary

Sep 30, 2023

ಕೋಟ: ಭಾರತದ ಪ್ರತಿಯೊಬ್ಬ ಪ್ರಜೆಯೂ ಶಿಕ್ಷಣವನ್ನು ಪಡೆಯಬೇಕು ಈ ನಿಟ್ಟಿನಲ್ಲಿ ನಮ್ಮ ಎಲ್ಲಾ ರೋಟರಿ ಕ್ಲಬ್‍ಗಳು ಸಹಕರಿಸಬೇಕು ಎಂದು ರೋಟರಿ ಜಿಲ್ಲೆಯ 2024-25ರ ಸಾಲಿನ ಜಿಲ್ಲಾ ಗವರ್ನರ್ ದೇವಾನಂದ್ ರೋಟರಿ ಸದಸ್ಯರಿಗೆ ಕರೆ ಇತ್ತರು.

ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‍ನ ವತಿಯಿಂದ ವಲಯ ಮಟ್ಟದ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆ ಎಂಬ ವಿಷಯದ ಬಗ್ಗೆ ಹೋಟೆಲ್ ಆಶ್ರಯ ಸಭಾಂಗಣ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ವಿಚಾರ ಸಂಕಿರಣ ಸಮಾರಂಭದ ಅಧ್ಯಕ್ಷತೆಯನ್ನು ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‍ನ ಅಧ್ಯಕ್ಷ ಅರವಿಂದ ಶರ್ಮ ವಹಿಸಿದ್ದರು.
ರೋಟರಿ ಜಿಲ್ಲೆಯ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆಯ ಜಿಲ್ಲಾಧ್ಯಕ್ಷ ಸುರೇಶ್ ಕೋಣಂದೂರ್ ಮತ್ತು ಸಾಕ್ಷರತಾ ಅಭಿಯಾನದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿಚಾರ ಸಂಕಿರಣವನ್ನು ನಡೆಸಿಕೊಟ್ಟರು. ವಲಯ 3ರ ಅಸಿಸ್ಟೆಂಟ್ ಗವರ್ನರ್ ಆಲ್ವಿನ್ ಕ್ವಾಡ್ರಸ್ ಪ್ರಸ್ತಾವಿಕ ಮಾತುಗಳನ್ನಾಡಿದರು.

ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಯ್ಕೆಯಾದ 10 ಮಂದಿ ಶಿಕ್ಷಕರನ್ನು ಗುರುತಿಸಿ ಅವರಿಗೆ ನ್ಯಾಷನಲ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಇಂಟರಾಕ್ಟ ಜಿಲ್ಲಾಧ್ಯಕ್ಷ ಬಿ.ಎಂ ಭಟ್ , ವಲಯ ತರಬೇತುದಾರ ಪದ್ಮನಾಭ ಕಾಂಚನ್, ವಲಯ ಕಾರ್ಯದರ್ಶಿ ರಾಮದೇವ ಕಾರಂತ್, ವಲಯ ಸಂಯೋಜಕ ರಾಜಾರಾಮ್ ಶೆಟ್ಟಿ, ವಲಯ ಸೇನಾನಿ ರಾಜಾರಾಮ್ ಐತಾಳ್, ವಿಜಯ ಶೆಟ್ಟಿ, ಗಣೇಶ್.ಜಿ ಉಪಸ್ಥಿತರಿದ್ದರು.

ವಲಯ 3ರ ಒಂಬತ್ತು ರೋಟರಿ ಕ್ಲಬ್‍ಗಳ ಎಲ್ಲಾ ಸದಸ್ಯರು ಭಾಗವಹಿಸಿ ಈ ವಿಚಾರ ಸಂಕಿರಣದ ಪ್ರಯೋಜನವನ್ನು ಪಡೆದುಕೊಂಡರು. ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‍ನ ಕಾರ್ಯದರ್ಶಿ ಕರುಣಾಕರ ಶೆಟ್ಟಿ ವಂದಿಸಿದರು.ಕ್ಲಬ್‍ನ ನರೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‍ನ ವತಿಯಿಂದ ವಲಯ ಮಟ್ಟದ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆ ಎಂಬ ವಿಷಯದ ಬಗ್ಗೆ ಹೋಟೆಲ್ ಆಶ್ರಯ ಸಭಾಂಗಣ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಯ್ಕೆಯಾದ 10 ಮಂದಿ ಶಿಕ್ಷಕರನ್ನು ಗುರುತಿಸಿ ಅವರಿಗೆ ನ್ಯಾಷನಲ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *