
ಕೋಟ : ಮತ್ತೆ ಅಕ್ಟೋಬರ್ ಬಂದಿದೆ. ಅಕ್ಟೋಬರ್ ತಿಂಗಳು ಬಂದ ಕ್ಷಣ ಕೋಟ ಪರಿಸರದಲ್ಲಿ ಒಂದು ಹಬ್ಬದ ವಾತಾವರಣ, ಸಾಹಿತ್ಯಿಕ-ಸಾಂಸ್ಕøತಿಕ ಕಾರ್ಯಕ್ರಮದ ಹಬ್ಬವೇ ಎನ್ನಬಹುದೆನೋ, ಕೋಟ ಎಂದಾಕ್ಷಣ ಮೊದಲು ಎಲ್ಲರಿಗೂ ನೆನಪಾಗುವುದು ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಡಾ|| ಶಿವರಾಮ ಕಾರಂತರ ನೆನಪು. ಕೋಟ ಎನ್ನುವ ಚಿಕ್ಕ ಊರನ್ನು ಪ್ರಪಂಚದಾದ್ಯಂತ ಪಸರಿಸಿದÀ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಹುಟ್ಟಿ ಬೆಳೆದ ತವರೂರಿನಲ್ಲಿ ಅವರ ಹುಟ್ಟಿದ ದಿನದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಕಾರಂತರ ಆಸಕ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮ ಪಂಚಾಯತ ಹಾಗೂ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕಳೆದ ಹದಿನೆಂಟು ವರ್ಷಗಳಿಂದ ಮಾಡುತ್ತಾ ಬಂದಿದೆ. ದೇಶದ ಇತಿಹಾಸದಲ್ಲಿಯೇ ಒಂದು ಗ್ರಾಮ ಪಂಚಾಯತ್ ಸಾಹಿತಿಯೊರ್ವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಕೋಟತಟ್ಟು ಗ್ರಾಮ ಪಂಚಾಯತ್ನ ಒಂದು ಹೆಗ್ಗಳಿಕೆ, ಸಾಹಿತ್ಯಿಕ -ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಕಾರ್ಯಕ್ರಮ ಆಯೋಜಿಸಿ ನಡೆದಾಡುವ ವಿಶ್ವಕೋಶ ಎಂದೇ ಪ್ರಖ್ಯಾತರಾದವರಿಗೆ ವಿಶಿಷ್ಟ ರೀತಿಯಲ್ಲಿ ನಮಿಸುವುದು ಅವರಿಗೆ ಹುಟ್ಟೂರಿನಲ್ಲಿ ಕೊಡುವ ಅಭಿಮಾನದ ಗೌರವ.
ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ
ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಸಹಭಾಗಿತ್ವದಲ್ಲಿ ಕಳೆದ ಹದಿನಾರು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. 2005 ರಲ್ಲಿ ಆರಂಭವಾದ ಹುಟ್ಟೂರ ಪ್ರಶಸ್ತಿ ಕಾರ್ಯಕ್ರಮ 18 ವರ್ಷಗಳಿಂದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬಂದಿದ್ದು.
ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2023ರ ಸಾಲಿನಲ್ಲಿ ಹಲವು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ಕಾರಂತೋತ್ಸವಕ್ಕೆ ಗೌರವಾನ್ವಿತ ರಾಜ್ಯಪಾಲರಿಂದ ಚಾಲನೆ
ಪ್ರತಿ ವರ್ಷದಂತೆ ಕಾರಂತೋತ್ಸವಕ್ಕೆ ವಿಶಿಷ್ಟ ಹೆಸರಿನೊಂದಿಗೆ ಕಾರ್ಯಕ್ರಮ ಆಯೋಜಿಸುವುದು ವಾಡಿಕೆ. 19 ನೇ ವರ್ಷದ ಈ ಸಲದ ಕಾರಂತೋತ್ಸವಕ್ಕೆ ಇಂಪನ-2023(ಸಂಗೀತ ಸಂಪುಟದ ಸಂಚಲನ)ಶೀರ್ಷಿಕೆ ಇಡಲಾಗಿದೆ. ಕಾರಂತೋತ್ಸವ ಕಾರ್ಯಕ್ರಮವು ಅಕ್ಟೋಬರ್ 3 ರಿಂದ 10ರ ತನಕ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯಲಿದ್ದು. ಡಾ|| ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮದ ಉದ್ಟಾಟನೆಯನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಕ್ಟೋಬರ್ 3 ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀ ಎ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದು. ಘನ ಉಪಸ್ಥಿತಿಯಲ್ಲಿ ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ನಲ್ನುಡಿ ಮಾತುಗಳನಾಡಲಿದ್ದು, , ಮುಖ್ಯ ಅತಿಥಿಗಳಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರ ಶಾಸಕ ಶ್ರೀ ವಿ ಸುನೀಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಶ್ರೀಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಶ್ರೀಯಶ್ಪಾಲ್ ಎ ಸುವರ್ಣ, ಮಾಜಿ ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಶಾಸಕ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಶಾಸಕ ಶ್ರೀ ಮಂಜುನಾಥ ಭಂಡಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಕೆ ಸತೀಶ್ ಕುಂದರ್ ಅಲ್ಲದೇ ಶಾಸಕರು ಸೇರಿದಂತೆ ಕ್ಷೇತ್ರದ ಹಲವಾರು ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆ.
ಅಕ್ಟೋಬರ್ 10 ರಂದು ಪ್ರಶಸ್ತಿ ಪ್ರದಾನ
ಅಕ್ಟೋಬರ್ 10 ರಂದು ಮಂಗಳವಾರ ಸಂಜೆ 4 ಗಂಟೆಗೆ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರಿಗೆ ಕಾನೂನು ಹಾಗೂ ಸಂಸದೀಯ, ಪ್ರವಾಸೋದ್ಯಮ ಇಲಾಖೆ ಸಚಿವರಾದ ಶ್ರೀ ಹೆಚ್ ಕೆ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಮಾಡಲಿದ್ದಾರೆ. ಜನಪ್ರತಿನಿಧಿಗಳು ಸೇರಿದಂತೆ ಹಲವಾರು ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡಯಲಿದೆ.
ರಾಜ್ಯ ಮಟ್ಟದ ಚಲನಚಿತ್ರ ಉತ್ಸವ-ಸಂವಾದ
ಅಕ್ಟೋಬರ್ 4 ರಿಂದ 8ರ ತನಕ ರಾಜ್ಯಮಟ್ಟದ ಚಲನಚಿತ್ರ ಉತ್ಸವ ಹಾಗೂ ಚಿತ್ರ ತಂಡದೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಮಾರ್ಡನ್ ಮಹಾಭಾರತ, ಕೋಳಿತಾಳ್, ಮೂಕಜ್ಜಿಯ ಕನಸುಗಳು,ಕಾಂತಾರ, ಸುಗಂಧಿ ಚಲನಚಿತ್ರಗಳನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 9 ರಂದು ಡಾ|| ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಅಕ್ಟೋಬರ್ 10 ರಂದು ಜಿಲ್ಲೆಯ ಖ್ಯಾತ ಕಲಾವಿದರ ಸಂಗಮ ಮಧುರ ಗೀತೆಗಳ ಮಧುರಯಾನ “ಮಾರ್ದನಿ” ಕಾರ್ಯಕ್ರಮ ನಡೆಯಲಿದೆ.

ಕಾರಂತ ಹುಟ್ಟೂರ ಪ್ರಶಸ್ತಿಗೆ ವಿಶ್ವವ್ಯಾಪಿ ಮನ್ನಣೆ ಪಡೆದಿದೆ, ಥೀಂ ಪಾರ್ಕ ಕೋಟ ಮಣ್ಣಿನ ಸೊಗಡಿಗೆ ಸರಿಸಾಟಿ ಇಲ್ಲ ಎನ್ನುವಂತೆ ಜನಮನ್ನಣೆಗಳಿಸಿದೆ. ಅದರಲ್ಲೂ ಈ ಬಾರಿ ಸಂಗೀತ ಕ್ಷೇತ್ರದ ಭಕ್ತಿಸುಧೆಯ ವಿದ್ಯಾಭೂಷಣರಿಗೆ ಪ್ರಶಸ್ತಿ ಆಯ್ಕೆಯಾಗಿರುವುದು ಕಾರಂತರ ಪ್ರಶಸ್ತಿಯ ಗೌರವ ಹೆಚ್ಚಿಸಿದೆ, ಆನಂದ್ ಸಿ ಕುಂದರ್ ಕಾರ್ಯಾಧ್ಯಕ್ಷರು ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ.
Leave a Reply