ಕೋಟ : ಮನುಷ್ಯ ಜನ್ಮದಲ್ಲಿ ಮನುಷತ್ವಕ್ಕೆ ವಿಶೇಷವಾಗಿ ಮನ ಮಿಡಿಯಬೇಕು. ತನ್ನಲ್ಲಿರುವ ನೋವಿನಿಂದ ಹತಾಶೆ ಪಡುವ ಬದಲು ಪರರ ನೋವಿಗೆ ಧ್ವನಿಯಾಗುವುದರ ಮೂಲಕ ಸಮಾಜಕ್ಕೆ ನಮ್ಮಿಂದ ಸಾಧ್ಯವಾದಷ್ಟು ನೆರವಾಗಬೇಕು. ಶ್ರೀ ವಿನಾಯಕ ಯುವಕ ಮಂಡಲದ ಇಂತಹ ಪುರಸ್ಕಾರಗಳಿಂದ ಸಮಾಜಕ್ಕೆ ಒಂದಿಷ್ಟು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಲಿದೆ ಎಂತಹ ತುರ್ತು ಸಂದರ್ಭಗಳಲ್ಲಿ ನಿಮ್ಮ ಸೇವೆಗೆ ನಾನು ಸಿದ್ಧ ಎಂದು ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಹೇಳಿದರು.
ಅವರು ಶ್ರೀ ವಿನಾಯಕ ಯುವಕ ಮಂಡಲ ಸಾೈಬ್ರಕಟ್ಟೆ ಯಡ್ತಾಡಿ ಇದರ 12 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರ ಶಾಸಕ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಈಶ್ವರ್ ಮಲ್ಪೆ ಅವರ ಸಾಧನೆಯ ಹೆಜ್ಜೆಗಳು ಯುವ ಜನಾಂಗಕ್ಕೆ ಪ್ರೇರಕವಾಗಿದ್ದು ಬೆಳೆಯುತ್ತಿರುವ ಸಮಾಜದಲ್ಲಿ ಕೆಟ್ಟ ಹವ್ಯಾಸಗಳಿಗೆ ಬಲಿಯಾಗದೆ ಇಂತಹ ಮಹನೀಯರಿಂದ ಪ್ರೇರಣೆ ಪಡೆದುಕೊಳ್ಳಬೇಕು, ಸಂಸ್ಕಾರಯುತ ಬದುಕು ಕಟ್ಟಿಕೊಳ್ಳುವುದು ನಾವು ಸಮಾಜಕ್ಕೆ ಕೊಡುವ ಕೊಡುಗೆ ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ನಂದೀಶ ನಾಯ್ಕ, ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಸಾೈಬ್ರಕಟ್ಟೆ, ಶಿರಿಯಾರದ ಅಧ್ಯಕ್ಷ ಅಶೋಕ ಪ್ರಭು, ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಹಾತ್ಮ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ ನಾಯ್ಕ, ಉದ್ಯಮಿ ಅರುಣ್ ಹೆಗ್ಡೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಸದಸ್ಯರಾದ ಅಜಿತ್ ಕುಮಾರ್ ಸ್ವಾಗತಿಸಿ, ರಾಘವೇಂದ್ರ ಶೆಟ್ಟಿ ಹೆಸ್ಕುತ್ತೂರು ನಿರೂಪಿಸಿದರು.
ಶ್ರೀ ವಿನಾಯಕ ಯುವಕ ಮಂಡಲ ಸಾೈಬ್ರಕಟ್ಟೆ ಯಡ್ತಾಡಿ ಇದರ 12 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರವನ್ನು ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಪ್ರದಾನ ಮಡಲಾಯಿತು. ಯುವಕ ಮಂಡಲದ ಅಧ್ಯಕ್ಷ ನಂದೀಶ ನಾಯ್ಕ, ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಸಾೈಬ್ರಕಟ್ಟೆ, ಶಿರಿಯಾರದ ಅಧ್ಯಕ್ಷ ಅಶೋಕ ಪ್ರಭು ಮತ್ತಿತರರು ಇದ್ದರು.