
ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸವಾಗಿದ್ದ ಇಬ್ಬರು ವಿದೇಶಿಯರನ್ನು ಬಂಧಿಸಲಾಗಿದೆ.
ನಗರದಲ್ಲಿ ಅಕ್ರಮವಾಗಿ ನೆಲೆಸಿದ ಘಾನಾ ದೇಶದ ಸಲಾಂ ಕ್ರಿಸ್ಟೈನ್ ಮತ್ತು ನೈಜೀರಿಯಾದ ಅಂಕಿತೋಲ ಎಂಬ ಇಬ್ಬರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಘಾನಾ ದೇಶದ ಸಲಾಂ ಕ್ರಿಸ್ಟೈನ್ ಮತ್ತು ನೈಜೀರಿಯಾದ ಅಂಕಿತೋಲ ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ.ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
Leave a Reply